ಬಂಟ್ವಾಳದಲ್ಲಿ ಅಕ್ಷರ ಜಾತ್ರೆ: ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ವತಿಯಿಂದ 28ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ 2026ರ ಮಾರ್ಚ್ 26, 27 ಮತ್ತು 28ರಂದು ಅದ್ಧೂರಿಯಾಗಿ ನಡೆಯಲಿದೆ. “ತಂತ್ರಜ್ಞಾನ-ಸಾಹಿತ್ಯ-ಸಹಬಾಳ್ವೆ” ಎಂಬ ಆಶಯದೊಂದಿಗೆ ನಡೆಯುತ್ತಿರುವ ಈ ಅಕ್ಷರ ಜಾತ್ರೆಯ ಸರ್ವಾಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ವಹಿಸಲಿದ್ದಾರೆ.

30ಕ್ಕೂ ಅಧಿಕ ಪುಸ್ತಕ ಮಳಿಗೆಗಳು, ಕರಾವಳಿಯ ಆಕರ್ಷಕ ವಸ್ತುಸಂಗ್ರಹ ಪ್ರದರ್ಶನ, ಗುಡಿಕೈಗಾರಿಕೆ, ಕರಕುಶಲ ಮತ್ತು ಆಹಾರ ಮಳಿಗೆಗಳು ಸಜ್ಜುಗೊಂಡಿವೆ. ಪಟ್ಟಾಂಗಕಟ್ಟೆಯಲ್ಲಿ ಅಜ್ಜಿಕಥೆ, “ಉತ್ತರ ಹೇಳಿ ಪುಸ್ತಕ ಗೆಲ್ಲಿ” ಸ್ಪರ್ಧೆ ಮತ್ತು ಗ್ರಾಮೀಣ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Advertisement

ಮಾರ್ಚ್ 27ರಂದು ಬೆಳಿಗ್ಗೆ 9.45ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಕ್ಯಾ. ಬ್ರಿಜೇಶ್ ಚೌಟ ಅಬ್ಬರದ ಭಾಷಣ: ದಕ್ಷಿಣ ಕನ್ನಡದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗೆ ಆಗ್ರಹ

ಕನ್ನಡ ನಾಟಕ ‘ಮೂರು ಮುತ್ತು’, ಯಕ್ಷಗಾನ ತಾಳಮದ್ದಳೆ ‘ಶರಸೇತುಬಂಧನ’, ನೃತ್ಯ ವೈಭವ ಮತ್ತು ಗಾನ ಸುಧೆ ಸಾಹಿತ್ಯಾಸಕ್ತರನ್ನು ರಂಜಿಸಲಿವೆ.ಮಾರ್ಚ್ 28ರ ಸಂಜೆ 4 ಗಂಟೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು