Breaking News

ಮಂಚಿ-ಇರಾ: ಸೆ.14ರಂದು 46ನೇ ಶ್ರೀ ಗಣೇಶೋತ್ಸವ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮಂಚಿ-ಇರಾ ವತಿಯಿಂದ ಆಯೋಜಿಸಲಾದ 46ನೇ ಶ್ರೀ ಗಣೇಶೋತ್ಸವವು ಸೆ.14ರಂದು ಶ್ರೀ ಸಿದ್ಧಿ ವಿನಾಯಕ ಪ್ರಸನ್ನ ಭಜನಾ ಮಂದಿರದ ಆವರಣದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 8.30ರಿಂದ ಗಣಪತಿಯಾಗ, ಗಣಪತಿ ದೇವರ ವಿಗ್ರಹ ಪ್ರತಿಷ್ಠಾಪನೆ, ತೆನೆ ವಿತರಣೆ ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದೆ.

ಸಂಜೆ 5ರಿಂದ 7ರವರೆಗೆ ಶಿವಚಕ್ರ ಕಲಾ ತಂಡದಿಂದ “ನೃತ್ಯ ಕಲಾ ವೈಭವ” ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ಮಹಾಪೂಜೆ, ಶೋಭಾಯಾತ್ರೆ ಹಾಗೂ ಮೂರ್ತಿ ವಿಸರ್ಜನೆ ನಡೆಯಲಿದೆ.

ಇದನ್ನೂ ಓದಿ: ಬ್ಯಾಂಕಿಂಗ್ ಕ್ಷೇತ್ರಕ್ಕೆ ಎಐ, ಆಟೋಮೇಷನ್ ಪ್ರಭಾವ: ದೇಶದ ಟಾಪ್ 10 ಖಾಸಗಿ ಬ್ಯಾಂಕ್‌ಗಳಲ್ಲಿ 10,000ಕ್ಕೂ ಹೆಚ್ಚು ಹುದ್ದೆಗಳ ಕಡಿತ

ವಿಶೇಷ ಆಕರ್ಷಣೆಯಾಗಿ ಆಕರ್ಷಕ ತಾಲೀಮು ಪ್ರದರ್ಶನ ಹಾಗೂ ಚೆಂಡೆ ವಾದನ ಇರಲಿದೆ. ಕಾರ್ಯಕ್ರಮಕ್ಕೆ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *