ಭದ್ರಾವತಿ: ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 59ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಂಗಳವಾರ ಐರನ್ ಮಾತ್ರೆ ಸೇವಿಸಿದ ನಂತರ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಶಾಲಾ ಅಧಿಕಾರಿಗಳ ಮಾಹಿತಿ ಪ್ರಕಾರ, ವಿದ್ಯಾರ್ಥಿಗಳಿಗೆ ವಾರಕ್ಕೆ ಒಮ್ಮೆ ಮಾತ್ರ ಐರನ್ ಮಾತ್ರೆ ನೀಡಲಾಗುತ್ತದೆ. ಸೋಮವಾರ ನೀಡಬೇಕಿದ್ದ ಮಾತ್ರೆಗಳನ್ನು ಮಂಗಳವಾರ ವಿತರಿಸಲಾಗಿತ್ತು. ಮಾತ್ರೆ ಸೇವಿಸಿದ ಕೆಲವೇ ಹೊತ್ತಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಹೊಟ್ಟೆನೋವು ಎಂದು ದೂರು ನೀಡಿದರು. ಬಳಿಕ ಕೆಲವರು ವಾಂತಿ ಮಾಡಿದರು. ತದನಂತರ ಇತರ ಮಕ್ಕಳೂ ಹೊಟ್ಟೆನೋವು ಎಂದು ಹೇಳಲು ಆರಂಭಿಸಿದರು.

ಇದನ್ನೂ ಓದಿ : Rampur : ಗಂಡನನ್ನೇ ಇಬ್ಬರು ಪತ್ನಿಯರಿಗೆ ಹಂಚಿ ತೀರ್ಪು ನೀಡಿದ ಪಂಚಾಯತ್
ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಶಿಕ್ಷಕರು ಹಾಗೂ ಸ್ಥಳೀಯರು ತಕ್ಷಣ ಎಲ್ಲ ಮಕ್ಕಳನ್ನು ಭದ್ರಾವತಿಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ತಕ್ಷಣ ಚಿಕಿತ್ಸೆ ನೀಡಿದ್ದು, ಎಲ್ಲಾ 59 ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಘಟನೆಯ ಸುದ್ದಿ ತಿಳಿದ ತಕ್ಷಣ ಪೋಷಕರು ಹಾಗೂ ಗ್ರಾಮಸ್ಥರು ಆಸ್ಪತ್ರೆಗೆ ಆಗಮಿಸಿದರು.
ಇಲ್ಲಿಯವರೆಗೆ 5–6 ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಘಟನೆಯ ಬಳಿಕ ಗ್ಯಾರಂಟಿ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಬಿಇಒ ನಾಗೇಂದ್ರಪ್ಪ, ಗ್ರಾಮೀಣ ಸಿಪಿಐ ಚಿದಾನಂದ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಅಶೋಕ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

