ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಗ್ರಾಮದ ಹತ್ತಿರ ಇಂದು (ಏಪ್ರಿಲ್ 17, 2026) ಬೆಳ್ಳಂಬೆಳಗ್ಗೆ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಖಾಸಗಿ ಸ್ಲೀಪರ್ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ವೇಗವಾಗಿ ಬಂದ ಖಾಸಗಿ ಸ್ಲೀಪರ್ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ.ಕಾರಿನಲ್ಲಿದ್ದ ಆರು ಮಂದಿ ವಾಹನದಿಂದ ಹೊರಬರಲಾಗದೆ ಸಜೀವ ದಹನವಾಗಿದ್ದಾರೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಮೃತದೇಹಗಳು ಸುಟ್ಟು ಕರಕಲಾಗಿದ್ದು, ಕೇವಲ ಅಸ್ಥಿಪಂಜರಗಳು ಮಾತ್ರ ಪತ್ತೆಯಾಗಿವೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ರಸ್ತೆ ರಕ್ತಪಾತ: ಪ್ರತ್ಯೇಕ ಅಪಘಾತಗಳಲ್ಲಿ ಯುವಕ ಹಾಗೂ ಆಟೋ ಚಾಲಕ ಸಾವು!
ಅಪಘಾತದ ನಂತರ ಬಸ್ ಮತ್ತು ಕಾರು ಎರಡೂ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಕಾಲದಲ್ಲಿ ಹೊರಬಂದ ಕಾರಣ ಭಾರಿ ಅನಾಹುತವೊಂದು ತಪ್ಪಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಸುರಪುರ ಠಾಣೆಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

