Breaking News

ತಮಿಳುನಾಡಿನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ: 74 ಲಕ್ಷ ಮತದಾರರು ಡಿಲೀಟ್

ತಮಿಳುನಾಡು: ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಇಂದು ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ಇಂದು ರಾಜ್ಯ ಸಚಿವಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಂತರ, ಒಟ್ಟು ಮತದಾರರ ಸಂಖ್ಯೆ 5.67 ಕೋಟಿಗೆ ಇಳಿದಿದೆ.

Advertisement

ಇದನ್ನೂ ಓದಿ: ಬಿಸಿಲ ಬೇಗೆಯ ನಡುವೆ ಮಳೆ ಮುನ್ಸೂಚನೆ: ಮಂಗಳೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಿಗೆ ಮುಂದಿನ 3 ಗಂಟೆ ‘ಎಲ್ಲೋ ಅಲರ್ಟ್’!

ಪರಿಷ್ಕರಣೆ ಆರಂಭವಾಗುವ ಮೊದಲು ತಮಿಳುನಾಡಿನಲ್ಲಿ 6.41 ಕೋಟಿ ನೋಂದಾಯಿತ ಮತದಾರರಿದ್ದರು. ಹೊಸ ಪಟ್ಟಿಯಿಂದ ಸುಮಾರು 74 ಲಕ್ಷ ಮತದಾರರ ಹೆಸರು ತೆಗೆದು ಹಾಕಲಾಗಿದೆ ಎಂದು ತಿಳಿಸಿದರು.

ಜನವರಿ 30, 2026 ರಂದು ಹಕ್ಕು ಮತ್ತು ಆಕ್ಷೇಪಣೆಗಳ ಅವಧಿ ಮುಗಿದ ನಂತರ, 27.53 ಲಕ್ಷ ಮತದಾರರನ್ನು ಮತ್ತೆ ಪಟ್ಟಿಗೆ ಸೇರಿಸಲಾಗಿದೆ ಮತ್ತು 4.23 ಲಕ್ಷ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಹೇಳಿದರು.

‘ಮ್ಯಾಪಿಂಗ್ ಸಮಸ್ಯೆಯಿಂದ’ ನೋಟಿಸ್ ನೀಡಲಾಗಿದ್ದ ಸುಮಾರು 13 ಲಕ್ಷ ಮತದಾರರ ಹೆಸರುಗಳನ್ನು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಒಟ್ಟು 5.67 ಕೋಟಿ ಮತದಾರರಲ್ಲಿ 2.77 ಕೋಟಿ ಪುರುಷರು ಮತ್ತು 2.89 ಕೋಟಿ ಮಹಿಳೆಯರು, 18-19 ವರ್ಷ ವಯಸ್ಸಿನ 12.51 ಲಕ್ಷ ಮತದಾರರಿದ್ದಾರೆ. ಪಟ್ಟಿಯಲ್ಲಿ 4.63 ಲಕ್ಷ ಅಂಗವಿಕಲ ಮತದಾರರು ಮತ್ತು 85 ವರ್ಷಕ್ಕಿಂತ ಮೇಲ್ಪಟ್ಟ 3.99 ಲಕ್ಷ ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮತದಾರರ ಪಟ್ಟಿಯ ನಿರಂತರ ನವೀಕರಣ ಕಾರ್ಯ ನಡೆಯುತ್ತಿದ್ದು, ಅರ್ಹ ಮತದಾರರು ತಮ್ಮನ್ನು ನೋಂದಾಯಿಸಿಕೊಳ್ಳಲು ನಮೂನೆ 6 ಅನ್ನು ಸಲ್ಲಿಸಬಹುದು ಎಂದು ಪಟ್ನಾಯಕ್ ತಿಳಿಸಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು