ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ!: ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ

ಚೆನ್ನೈ: ದಕ್ಷಿಣ ಭಾರತದ ರಾಜಕಾರಣದಲ್ಲಿ ದಶಕದ ಅತ್ಯಂತ ದೊಡ್ಡ ರಾಜಕೀಯ ಸ್ಫೋಟ ಸಂಭವಿಸಿದೆ. ತಮಿಳುನಾಡು ರಾಜಕಾರಣದಲ್ಲಿ ಹಲವು ದಿನಗಳಿಂದ ಹರಿದಾಡುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ತಮಿಳುನಾಡು ಬಿಜೆಪಿ ಘಟಕದ ಸಾರಥಿ, ಯುವ ನಾಯಕ ಕೆ. ಅಣ್ಣಾಮಲೈ (K Annamalai) ಅವರು ಭಾರತೀಯ ಜನತಾ ಪಕ್ಷದ (BJP) ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಅವರ ಮತ್ತು ಬಿಜೆಪಿಯೊಂದಿಗಿನ ಸಂಬಂಧ ಶುಕ್ರವಾರ (ಜೂನ್ 5) ಅಧಿಕೃತವಾಗಿ ಕೊನೆಗೊಂಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಅಣ್ಣಾಮಲೈ ಅವರು ನೀಡಿದ್ದ ರಾಜೀನಾಮೆಯನ್ನು ತಕ್ಷಣವೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ.  ಅಣ್ಣಾಮಲೈ ಅವರ ಈ ದಿಢೀರ್ ನಿರ್ಧಾರವು ಕೇವಲ ತಮಿಳುನಾಡು ಮಾತ್ರವಲ್ಲದೆ, ಇಡೀ ದಕ್ಷಿಣ ಭಾರತದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಸಂಚಲನ ಮೂಡಿಸಿದೆ.

ಇದನ್ನೂ ಓದಿ:ಬಿಜೆಪಿಗೆ ‘ಸಿಂಗಂ’ ಅಣ್ಣಾಮಲೈ ದಿಢೀರ್ ರಾಜೀನಾಮೆ!; ಹೊಸ ಪಕ್ಷ ಕಟ್ಟಲು ಮಾಸ್ಟರ್ ಪ್ಲಾನ್?!

ತಮ್ಮ ಮುಂದಿನ ನಡೆ, ಹೊಸ ರಾಜಕೀಯ ಪಯಣ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಪ್ರಕಟಿಸಲು ಅಣ್ಣಾಮಲೈ ಅವರು ಇಂದು ಮಧ್ಯಾಹ್ನ ಕೋಯಮತ್ತೂರಿನಲ್ಲಿ ಪ್ರಮುಖ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿದ್ದಾರೆ. ತಮಿಳುನಾಡಿನ ಯುವ ಜನತೆಯಲ್ಲಿ ಭಾರಿ ಕ್ರೇಜ್ ಮತ್ತು ಜನಪ್ರಿಯತೆ ಹೊಂದಿರುವ ಅಣ್ಣಾಮಲೈ ಅವರ ಈ ಮುಂದಿನ ಹೆಜ್ಜೆಯು ದ್ರಾವಿಡ ನಾಡಿನ ಭವಿಷ್ಯದ ರಾಜಕೀಯ ಸಮೀಕರಣಗಳನ್ನು ಸಂಪೂರ್ಣವಾಗಿ ಮರುರೂಪಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು