ಬೆಂಗಳೂರು: ಆರು ವರ್ಷದ ವಲಸೆ ಬಾಲಕಿಯ ಕಿಡ್ನಾಪ್ ಮತ್ತು ಕೊಲೆ ಪ್ರಕರಣ ವೈಟ್ ಫೀಲ್ಡ್ ನಲ್ಲಿ ನಡೆದಿದ್ದು, ಈ ಪ್ರಕರಣದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆಯನ್ನು ಪೊಲೀಸರು ತಿಳಿಸಿದ್ದು, ಹತ್ಯೆ ನಡೆಸುವುದಕ್ಕೂ ಮುನ್ನ ಆರೋಪಿ ಯೂಸುಫ್ ಮೀರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಪೋಲಿಸರು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಆರೋಪಿಯನ್ನು ಹೆಚ್ಚುವರಿ 10 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಆರು ತಿಂಗಳ ಹಿಂದೆ ನಗರಕ್ಕೆ ಬಂದಿದ್ದು, ಸ್ಕ್ರ್ಯಾಪ್ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ. ಆತನಿಗೆ ಬಾಲಕಿಯ ಕುಟುಂಬದ ಜೊತೆಗೆ ವೈಮನಸ್ಸು ಇತ್ತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ನಿಧನ
ಜ. 5 ರಂದು ಬಾಲಕಿ ಆಕೆಯ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಆರೋಪಿ ಅವಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಕತ್ತು ಹಿಸುಕಿ ಕೊಂದು ಶವವನ್ನು ಗೋಣಿ ಚೀಲದಲ್ಲಿ ತುಂಬಿದ್ದ. ಆ ಬಳಿಕ ಶವವನ್ನು ತನ್ನ ಸೈಕಲ್ ನಲ್ಲಿ ನಲ್ಲೂರಹಳ್ಳಿಯ ಚರಂಡಿಯೊಂದಕ್ಕೆ ಎಸೆದು ಪರಾರಿಯಾಗಿದ್ದ ಎಂದು ಪೋಲಿಸ್ ತನಿಖೆ ವೇಳೆ ತಿಳಿದು ಬಂದಿದೆ.
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

