ದಿನಗೂಲಿ ಮಹಿಳೆಗೆ ಮಾದಕ ದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ; ವಿಡಿಯೋ ವೈರಲ್ ಮಾಡಿದ 10 ಕಾಮುಕರ ಹೆಡೆಮುರಿ ಕಟ್ಟಿದ ಪೊಲೀಸರು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಮಾದಕ ದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ ಎಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬದುಕುಳಿದ ಮಹಿಳೆ ದಿನಗೂಲಿ ಕೆಲಸ ಮಾಡುತ್ತಿದ್ದು, ಆ ಪ್ರದೇಶದ ಬಾಳೆ ತೋಟದೊಳಗೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ.

ಆಹಾರ ಮತ್ತು ಜ್ಯೂಸ್ ನೀಡುವುದಾಗಿ ಹೇಳಿ ಪುರುಷರ ಗುಂಪೊಂದು ಮಹಿಳೆಯನ್ನು ಮರುಳು ಮಾಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದನ್ನು ನಂಬಿದ ಮಹಿಳೆ ಅವರೊಂದಿಗೆ ವಾಹನ ಹತ್ತಿ ಗ್ರಾಮದ ಬಳಿಯ ಜಮೀನಿಗೆ ಕರೆದೊಯ್ಯಲಾಯಿತು. ಈ ತಂಪು ಪಾನೀಯದಲ್ಲಿ ನಿದ್ರಾಜನಕ ಬೆರೆಸಲಾಗಿದೆ ಎಂದು ಶಂಕಿಸಲಾಗಿದೆ, ಇದನ್ನು ನೀಡಿದ ನಂತರ ಆಕೆ ಪ್ರಜ್ಞೆ ತಪ್ಪಿದ್ದಾಳೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಮೂರನೇ ಅಂತಸ್ತಿನ ಬಾಲ್ಕನಿಯಿಂದ ಜಿಗಿದು ಬಂದು ಕತ್ತರಿಯಿಂದ 100 ಬಾರಿ ಇರಿದ ಹಂತಕ!: ಡ್ರಗ್ಸ್ ಅಮಲಿನಲ್ಲಿ ನಡೆದ ಭೀಕರ ಹತ್ಯೆಗೆ ಕಠಿಣ ಶಿಕ್ಷೆ

ಪ್ರಜ್ಞೆ ತಪ್ಪಿದ ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದನ್ನು ಆ ಪುರುಷರು ತಮ್ಮ ಫೋನ್​​​ನಲ್ಲಿ ರೆಕಾರ್ಡ್​​ ಮಾಡಿದ್ದಾರೆ. ಒಂದು ವೇಳೆ ಈ ಬಗ್ಗೆ ಯಾರಿಗಾದರೂ ಹೇಳಿದ್ರೆ ಇದನ್ನು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಅದರೂ ಈ ಪುರುಷರು ಆಕೆ ವಿಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಹಿಳೆ ಬಸವಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಭಾಗಹಿಯಾಗಿರುವ 19ರಿಂದ 29 ವರ್ಷದೊಳಗಿನ ಯುವಕರು ಎಂದು ಹೇಳಲಾಗಿದೆ. ಇದೀಗ ಅವರನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ.

 

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು