ಇನ್ಮುಂದೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪಾಸ್’; ಈಗಾಗಲೇ ಕಟ್ಟಿರುವ ಹಣ ರಿಫಂಡ್!: ನಾಲ್ಕು ಸಾರಿಗೆ ನಿಗಮಗಳಿಗೆ 86.86 ಕೋಟಿ ರೂ. ಬಿಡುಗಡೆ

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿ ಹೊಸ ಇತಿಹಾಸ ಬರೆದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ, ಇದೀಗ ಯೋಜನೆ ಜಾರಿಗೆ ಆಡಳಿತಾತ್ಮಕವಾಗಿ ಅತ್ಯಂತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿಗಳು ಪಾವತಿಸಿರುವ ಸಂಪೂರ್ಣ ಹಣವನ್ನು ಸರ್ಕಾರವೇ ನೇರವಾಗಿ ಮರುಪಾವತಿ (Refund) ಮಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಹಣ ಮರುಪಾವತಿ ಮಾಡುವ ಹಾಗೂ ಉಚಿತ ಪಾಸ್ ವಿತರಣೆಯ ವೆಚ್ಚವನ್ನು ಭರಿಸುವ ಸಲುವಾಗಿ ರಾಜ್ಯ ಸರ್ಕಾರವು ಸಾರಿಗೆ ನಿಗಮಗಳಿಗೆ ಭಾರಿ ಮೊತ್ತದ ಹಣವನ್ನು ಬಿಡುಗಡೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. 2026-27ನೇ ಸಾಲಿನಲ್ಲಿ ಸಾಮಾನ್ಯ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ರಿಯಾಯಿತಿ ಮತ್ತು ಉಚಿತ ಬಸ್ ಪಾಸ್ ವೆಚ್ಚದ ಮರುಪಾವತಿಗಾಗಿ (Subsidy Reimbursement) ಕರ್ನಾಟಕದ ನಾಲ್ಕು ಪ್ರಮುಖ ಸಾರಿಗೆ ನಿಗಮಗಳಿಗೆ ಒಟ್ಟು 86 ಕೋಟಿಯ 86 ಲಕ್ಷದ 25 ಸಾವಿರ ರೂಪಾಯಿ (₹86,86,25,000) ಅನುದಾನವನ್ನು ಒದಗಿಸಲಾಗಿದೆ.

ಇದನ್ನೂ ಓದಿ:  ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರದ ಮೇಜರ್ ಸರ್ಜರಿ: 1.30 ಕೋಟಿ ಫಲಾನುಭವಿಗಳ ಪಟ್ಟಿಗೆ ಕತ್ತರಿ?; ಹೊಸ ನಿಯಮ ಜಾರಿಗೆ ಸಿದ್ದತೆ!

ಸರ್ಕಾರದ ಈ ತ್ವರಿತ ಮತ್ತು ಐತಿಹಾಸಿಕ ಗ್ಯಾರಂಟಿ ನಡೆಗೆ ವಿದ್ಯಾರ್ಥಿ ವಲಯ, ಯುವ ಸಮೂಹ ಹಾಗೂ ಪೋಷಕರಿಂದ ಭಾರಿ ಮೆಚ್ಚುಗೆ ಮತ್ತು ಧನ್ಯವಾದಗಳು ವ್ಯಕ್ತವಾಗುತ್ತಿವೆ. ಈ ಹಣ ಬಿಡುಗಡೆಯಿಂದಾಗಿ ಸಾರಿಗೆ ನಿಗಮಗಳಿಗೆ ಆರ್ಥಿಕ ಬಲ ಸಿಕ್ಕಂತಾಗಿದ್ದು, ಇನ್ನು ಒಂದೆರಡು ದಿನಗಳಲ್ಲಿ ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆ ಮತ್ತು ಹಣ ಮರುಪಾವತಿ ಪ್ರಕ್ರಿಯೆ ಅಧಿಕೃತವಾಗಿ ವೇಗ ಪಡೆದುಕೊಳ್ಳಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು