ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ರೈತರಿಗಾಗಿ ಸರ್ಕಾರ ನೀಡುವ ಸಬ್ಸಿಡಿ ದರದ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ರಾಜ್ಯ ಮಟ್ಟದ ಸಂಘಟಿತ ಜಾಲವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. ವಿಟ್ಲ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಡಿಗ ನೇತೃತ್ವದ ತಂಡ ನಡೆಸಿದ ಈ ಭೀಕರ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ರಸಗೊಬ್ಬರ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ರಸಗೊಬ್ಬರ ಕಳ್ಳದಂಧೆಗೆ ಸಂಬಂಧಿಸಿದಂತೆ ಕೊಂಡಿಗ ಸರ್ಕಾರಿ ಶಾಲೆಯ ಸಮೀಪದ ಕೋಲ್ನಾಡು ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಫ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ತನ್ನ ಸ್ವಂತ ಮನೆಯಲ್ಲೇ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು, ಈ ದಂಧೆಯ ಜಾಲವನ್ನು ಆಪರೇಟ್ ಮಾಡುತ್ತಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಇದನ್ನೂ ಓದಿ:Bantwal: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಚಿಕ್ಕಮಗಳೂರು ಜೈಲಿಗೆ ಸ್ಥಳಾಂತರ
ಬಡ ರೈತರಿಗೆ ತಲುಪಬೇಕಾದ ರಸಗೊಬ್ಬರವನ್ನು ಕದ್ದು, ಬಣ್ಣ ಬದಲಾಯಿಸಿ ಅಥವಾ ಚೀಲಗಳನ್ನು ಬದಲಾಯಿಸಿ ಬೇರೆ ರಾಜ್ಯಗಳಿಗೆ ಹಾಗೂ ಕೈಗಾರಿಕೆಗಳಿಗೆ ಹೆಚ್ಚಿನ ಬೆಲೆಗೆ ಸಾಗಿಸುವ ವ್ಯವಸ್ಥಿತ ನೆಟ್‌ವರ್ಕ್ ಇದರ ಹಿಂದೆ ಕೆಲಸ ಮಾಡುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿ ವೇಳೆ ಸಾಗಾಟಕ್ಕೆ ಸಿದ್ಧವಾಗಿದ್ದ ಭಾರಿ ಪ್ರಮಾಣದ ಯೂರಿಯಾ ಮೂಟೆಗಳನ್ನು ವಶಕ್ಕೆ ಪಡೆಯಲಾಗಿದ್ದು, ಈ ಜಾಲದಲ್ಲಿ ಭಾಗಿಯಾಗಿರುವ ಇನ್ನುಳಿದ ಕಿಡಿಗೇಡಿಗಳ ಪತ್ತೆಗಾಗಿ ವಿಟ್ಲ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


