ನಟಿ ರುಕ್ಮಿಣಿ ವಸಂತ್ ಎಐ ಅಶ್ಲೀಲ ವಿಡಿಯೋ ಕೇಸ್: ಮೂವರು ಕಿಡಿಗೇಡಿಗಳನ್ನು ಬಂಧಿಸಿದ ಸೈಬರ್ ಕ್ರೈಂ ಪೊಲೀಸರು

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲ ಚಿತ್ರ ಹಾಗೂ ವಿಡಿಯೋಗಳನ್ನು (Obscene Visuals) ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಮೂವರು ಆರೋಪಿಗಳನ್ನು ಕರ್ನಾಟಕ ಸೈಬರ್ ಕಮಾಂಡ್ ಪೊಲೀಸರು ಶುಕ್ರವಾರ ಯಶಸ್ವಿಯಾಗಿ ಬಂಧಿಸಿದ್ದಾರೆ.

ನಟಿಯ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಮಾರ್ಫಿಂಗ್ ವಿಡಿಯೋ ಹರಿಬಿಟ್ಟಿದ್ದ ಪ್ರಕರಣದ ಜಾಡು ಹಿಡಿದ ಸೈಬರ್ ಇನ್ವೆಸ್ಟಿಗೇಟರ್ಸ್ ತನಿಖೆ ನಡೆಸಿ ಆರೋಪಿಗಳನ್ನು ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತ ಆರೋಪಿಗಳಾದ ರವಿಕುಮಾರ್ (24) ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ. ಚಂದ್ರಕಾಂತ್ (33) ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿ. ರಂಜಿತ್ (25) ಬೆಂಗಳೂರಿನ ನಾಗಸಂದ್ರದ ನಿವಾಸಿ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಹೋಗಲು ಸಾಮಾನ್ಯ ಜನರಿಗೆ ಲಾಸ್ಟ್ ಚಾನ್ಸ್!: ಆಡಿಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ಯಾವಾಗ?

ನಟಿ ರುಕ್ಮಿಣಿ ವಸಂತ್ ಅವರ ದೂರಿನ ಅನ್ವಯ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಸೈಬರ್ ಕಮಾಂಡ್ ಪಡೆ ತಾಂತ್ರಿಕ ಆಧಾರದ ಮೇಲೆ ಮೂವರನ್ನು ಬಂಧಿಸಿದೆ. ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ಪ್ರಮುಖ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು ಹಾಗೂ ಮಹಿಳೆಯ ಶೀಲಕ್ಕೆ ಮತ್ತು ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಸೈಬರ್ ಕೃತ್ಯ ಎಸಗಿರುವುದಕ್ಕೆ ಸಂಬಂಧಿಸಿದ ಕಠಿಣ ಕಾನೂನು ನಿಯಮಗಳ ಅಡಿಯಲ್ಲಿ ತನಿಖೆ ಮುಂದುವರಿದಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು