ಜ.20 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

nitin nabin

ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಜನವರಿ 20ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರಕ್ಕೇರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯದ ಮುಖ್ಯಮಂತ್ರಿಗಳು, ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯಾಧ್ಯಕ್ಷರು ಮತ್ತು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯರು ಸೇರಿದಂತೆ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ : Kerala : ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳಿಗೆ ಕೇರಳ‌ದಲ್ಲಿ ನಿರ್ಬಂಧ

Advertisement

ಅಧ್ಯಕ್ಷರ ಚುನಾವಣೆಗೆ ನಾಮನಿರ್ದೇಶನಗಳು ಜನವರಿ 19ರಂದು ನಡೆಯಲಿದೆ.  ಮರುದಿನ ಚುನಾವಣೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.. ಡಿಸೆಂಬರ್ 15ರಂದು ನಬಿನ್‌ ಅವರನ್ನು ಬಿಜೆಪಿ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. 45 ವರ್ಷದ ನಬಿನ್‌ ಬಿಹಾರದ ಪಾಟ್ನಾ ಜಿಲ್ಲೆಯ ಬಂಕಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಲಿದ್ದಾರೆ.

ಯುವ ನಾಯಕರಿಗೆ ಮಹತ್ವದ ಜವಾಬ್ದಾರಿ ನೀಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಈ ಹುದ್ದೆಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.  ಛತ್ತೀಸ್‌ಗಢದ ಉಸ್ತುವಾರಿಯಾಗಿದ್ದ ನಬಿನ್‌ ಅಲ್ಲಿ ಪಕ್ಷವನ್ನು ಆಡಳಿತಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.  ಇವರ ಕೆಲಸವನ್ನು ಗುರುತಿಸಿ ಇವರಿಗೆ ದೆಹಲಿ ಚುನಾವಣೆಯ ಪ್ರಚಾರದಲ್ಲಿ ಪ್ರಮುಖ ಪಾತ್ರ ನೀಡಲಾಗಿತ್ತು.

Advertisement

ಡಿ .14ರಂದು  ಬಿಹಾರದಲ್ಲಿ ಪಕ್ಷ ಅಧಿಕಾರಕ್ಕೆ ಏರಲು ಕಾರಣರಾದ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ನಿತಿನ್‌ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಇರುವಾಗಲೇ ನಿತಿನ್ ನಬಿನ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ಘೋಷಿಸಿತ್ತು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು