Breaking News

ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡದ ಮಹಿಳೆಯ ಬಂಧನ

drugs-uganda-woman

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿರುವ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ದ್ದಾರೆ.   ಅವಳಿಂದ ಸುಮಾರು 4 ಕೋ. ರೂ. ಮೌಲ್ಯದ 4 ಕೆಜಿ ಡ್ರಗ್ಸ್ ವಸ್ತು ವಶಪಡಿಸಿಕೊಂಡಿ ದ್ದಾರೆ.

ಬೆಂಗಳೂರಿನ ಹೊರವಲಯದ ಜಿಗಾನಿಯಲ್ಲಿ ಸಿಕ್ಕಿಬಿದಿದ್ದು,  4 ಆರೋಪಿಯನ್ನು ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ, ವಶಪಡಿಸಿಕೊಂಡ ಅಕ್ರಮ ವಸ್ತುಗಳ ಮೌಲ್ಯ ಸುಮಾರು 4 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

Advertisement

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಬಂಧನದೊಂದಿಗೆ, ಮಂಗಳೂರಿಗೆ ಪ್ರಮುಖ ಮಾದಕವಸ್ತು ಪೂರೈಕೆ ಜಾಲವನ್ನು ಭೇದಿಸಲಾಗಿದೆ ಎಂದು ಖಚಿತಪಡಿಸಲಾಗಿದೆ.

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು