ಸುರಸರಸ್ವತೀ ಸಭಾ ಸಂಸ್ಕೃತ ಪರೀಕ್ಷೆ: ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ಚಂದ್ರಕಲಾ, ಶ್ರದ್ಧಾಗೆ ರಜತ ಪದಕದ ಗರಿ

ಕಲ್ಲಡ್ಕ: ಇಲ್ಲಿನ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ಸುರಸರಸ್ವತೀ ಸಭಾ ಸಂಸ್ಕೃತ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಭರ್ಜರಿ ಸಾಧನೆ ಮಾಡಿದ್ದಾರೆ. ಶೃಂಗೇರಿಯ ಸುರಸರಸ್ವತೀ ಸಭಾ (ರಿ) ವತಿಯಿಂದ ನಡೆಸಲ್ಪಟ್ಟ ‘ಪ್ರವೇಶ’ ಸಂಸ್ಕೃತ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಚಂದ್ರಕಲಾ ಮತ್ತು ಶ್ರದ್ಧಾ ಅವರು ರಜತ ಪದಕವನ್ನು (Silver Medal) ಮುಡಿಗೇರಿಸಿಕೊಂಡಿದ್ದಾರೆ.

ದಿನಾಂಕ 02-02-2026 ರಂದು ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ಭಾರವಿ ಸಂಸ್ಕೃತ ಸಂಘದ ಆಶ್ರಯದಲ್ಲಿ ಈ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು. ಅತ್ಯಂತ ಕಠಿಣ ಹಾಗೂ ವ್ಯವಸ್ಥಿತವಾಗಿ ನಡೆಯುವ ಈ ಪರೀಕ್ಷೆಯಲ್ಲಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ತೋರಿ, ರಜತ ಪದಕ ವಿಜೇತರಾಗುವ ಮೂಲಕ ವಿದ್ಯಾಲಯ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯರ ಈ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಾಧನೆಗೆ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Advertisement

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *