ಪುತ್ತೂರು: ನೆಹರುನಗರ ಸಮೀಪದ ಕಲ್ಲೇಗದಲ್ಲಿರುವ ಅಶ್ವಿನಿ ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆ ಸೋಮವಾರ ಭವ್ಯವಾಗಿ ಉದ್ಘಾಟನೆಗೊಂಡಿತು.
ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ್ ಭಟ್ ಕಲ್ಲಡ್ಕ ಅವರು, ಸಹಕಾರಿ ಕ್ಷೇತ್ರದಲ್ಲಿ ಸರಸ್ವತಿ ಕ್ರೆಡಿಟ್ ಸೌಹಾರ್ದ ಸೊಸೈಟಿ ಸಾಧಿಸಿರುವ ಪ್ರಗತಿ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿದೆ ಎಂದರು.

ಸೊಸೈಟಿಯು ಕಳೆದ 25 ವರ್ಷಗಳಲ್ಲಿ ಸುಮಾರು 800 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿರುವುದು ಸಂಸ್ಥೆಯ ಮೇಲಿನ ಜನರ ವಿಶ್ವಾಸದ ಪ್ರತೀಕವಾಗಿದೆ. ಎಸ್.ಆರ್.ಸತೀಶ್ಚಂದ್ರ ಅವರ ನೇತೃತ್ವದಲ್ಲಿ ಸಂಸ್ಥೆ ಉತ್ತಮವಾಗಿ ಬೆಳೆಯುತ್ತಿದ್ದು, ಶೀಘ್ರ ಸೇವೆ ಮತ್ತು ಜನಪರ ಕಾರ್ಯಗಳಿಂದ ಸಾಮಾನ್ಯ ಜನರಿಗೆ ವಿಶ್ವಾಸಾರ್ಹ ಸಂಸ್ಥೆಯಾಗಿ ರೂಪುಗೊಂಡಿದೆ ಎಂದು ಪ್ರಶಂಸಿಸಿದರು. ಭವಿಷ್ಯದಲ್ಲಿ ಇನ್ನಷ್ಟು ಶಾಖೆಗಳನ್ನು ತೆರೆಯುವ ಮೂಲಕ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸಲಿ ಎಂದು ಶುಭ ಹಾರೈಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ಸಹಕಾರ ರತ್ನ ಎಸ್.ಆರ್. ಸತೀಶ್ಚಂದ್ರ ಅವರು, ಸರಸ್ವತಿ ಕ್ರೆಡಿಟ್ ಸೌಹಾರ್ದ ಸಂಘವು 25 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ದೇಶದಲ್ಲೇ ಮೊದಲ ಬಾರಿಗೆ ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಜಾರಿಗೆ ತಂದ ಹೆಗ್ಗಳಿಕೆ ಸಂಸ್ಥೆಗೆ ಸಲ್ಲುತ್ತದೆ ಎಂದರು. ಉಳ್ಳಾಲ ಮತ್ತು ಸಿದ್ದಕಟ್ಟೆ ಪ್ರದೇಶಗಳಲ್ಲಿಯೂ ಶೀಘ್ರದಲ್ಲೇ ಹೊಸ ಶಾಖೆಗಳನ್ನು ಆರಂಭಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಪುತ್ತೂರು ಹಾಗೂ ಸಹಕಾರಿ ಕ್ಷೇತ್ರದ ನಡುವಿನ ಉತ್ತಮ ಬಾಂಧವ್ಯವನ್ನು ಉಲ್ಲೇಖಿಸಿದ ಅವರು, ಇಲ್ಲಿಂದ ಆರಂಭವಾದ ಅನೇಕ ಸಹಕಾರಿ ಬ್ಯಾಂಕುಗಳು ರಾಜ್ಯ ಹಾಗೂ ದೇಶ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವುದನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಎಂಎಲ್‌ಸಿ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕಲ್ಲೇಗ ಕಲ್ಕುಡ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಜೈನ್, ಕಲ್ಲೇಗ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಅಧ್ಯಕ್ಷ ಸಂಜೀವ ನಾಯಕ್, ನಗರಸಭೆಯ ಮಾಜಿ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ಅಶ್ವಿನಿ ಕಾಂಪ್ಲೆಕ್ಸ್ ಮಾಲಕ ಕೆ. ರಾಜಾರಾಮ್ ಪ್ರಭು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು.
ಸಂಘದ ಉಪಾಧ್ಯಕ್ಷ ಉಮೇಶ್ ಪ್ರಭು, ನಿರ್ದೇಶಕರಾದ ಚಂದ್ರಶೇಖರ ಭಟ್ ಎಂ, ದಯಾನಂದ ನಾಯಕ್ ಕೆ, ರವೀಶ ಪಿ, ರಾಜಗೋಪಾಲ ಬಿ, ಬಿ ವಸಂತ ಶಂಕರ್, ವೇದವ್ಯಾಸ ಕೆ, ಕೆ ಸಂಜೀವ ನಾಯಕ್, ಹರೀಶ್ ಬೋರ್ಕರ್ ಕೆ, ದೇವಕಿ ಕೆ, ರಂಜಿತಾ ಆರ್ ಪ್ರಭು, ವೃತ್ತಿಪರ ನಿರ್ದೇಶಕರಾದ ಪುಷ್ಪಲತಾ ಎನ್., ಅನಂತ ಕೃಷ್ಣ ಬಿ, ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ ನಾಯಕ್ ಎ, ಉಪಪ್ರಧಾನ ವ್ಯವಸ್ಥಾಪಕಿ ಭವಾನಿ ಪ್ರಭು, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಗೋಪಾಲಕೃಷ್ಣ ನಾಯಕ್ ಟಿ, ವಿಭಾಗೀಯ ಮುಖ್ಯಸ್ಥ ರವಿಚಂದ್ರ ನಾಯಕ್, ಪ್ರಧಾನ ಕಚೇರಿಯ ವ್ಯವಸ್ಥಾಪಕ ಮಂಜುನಾಥ್ ನಾಯಕ್ ಪಿ, ದರ್ಬೆ ಶಾಖೆಯ ವ್ಯವಸ್ಥಾಪಕ ದೇವಿಪ್ರಸಾದ್ ಎ, ಎಂ ಎಸ್ ರಸ್ತೆ ಶಾಖೆಯ ವ್ಯವಸ್ಥಾಪಕ ಸೀತಾರಾಮ ಪೂಜಾರಿ, ಬಿ ಸಿ ರೋಡ್ ಶಾಖೆಯ ವ್ಯವಸ್ಥಾಪಕ ಪ್ರದೀಪ್ ಕುಮಾರ್ ಎನ್, ವಿಟ್ಲ ಶಾಖೆಯ ವ್ಯವಸ್ಥಾಪಕಿ ಜೀವಿತ ಕೆ., ಸಹಕಾರಿಯ ಮಾಜಿ ನಿರ್ದೇಶಕರು, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳು, ಸಹಕಾರಿಯ ಸದಸ್ಯ, ಹಿತೈಷಿಗಳು ಉಪಸ್ಥಿತರಿದ್ದರು.
ನೂತನ ಶಾಖೆಯ ವ್ಯವಸ್ಥಾಪಕ ಶಿವಪ್ರಸಾದ್ ವಂದಿಸಿದರು. ದರ್ಬೆ ಶಾಖೆಯ ವ್ಯವಸ್ಥಾಪಕ ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ವೈಷ್ಣವಿ ನಾಯಕ್ ಪ್ರಾರ್ಥನೆ ನೆರವೇರಿಸಿದರು. ಸಿಬ್ಬಂದಿ ವರ್ಗ ಸಹಕರಿಸಿತು.

