ಕರಾವಳಿಯಲ್ಲಿ ವರುಣನ ಆರ್ಭಟ; ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಮಂಗಳೂರು : ಕರಾವಳಿ ಭಾಗದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದಕ್ಷಿಣ ಕನ್ನಡ ಜಿಲ್ಲೆಗೆ ಅತ್ಯಂತ ಕಠಿಣವಾದ ‘ರೆಡ್ ಅಲರ್ಟ್’ (Red Alert) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ, ಜುಲೈ 2ರ ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ (Darshan H V) ಅವರು ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ, ನಾಳೆ ಜಿಲ್ಲೆಯಾದ್ಯಂತ ಇರುವ ಈ ಕೆಳಗಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಇರಲಿದೆ:

Advertisement

ಎಲ್ಲಾ ಅಂಗನವಾಡಿ ಕೇಂದ್ರಗಳು

ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು

ಎಲ್ಲಾ ಪದವಿ ಪೂರ್ವ (PU) ಕಾಲೇಜುಗಳು (12ನೇ ತರಗತಿಯವರೆಗೆ)

ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆಯ 14 ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 57 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ಮಹತ್ವದ ಮಾಹಿತಿ

ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಜಿಲ್ಲಾಧಿಕಾರಿಗಳು ವಿನಂತಿಸಿದ್ದಾರೆ.

ನದಿ, ಬೀಚ್‌ಗಳಿಂದ ದೂರವಿರಿ: ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಕಾರಣಕ್ಕೂ ನದಿಗಳು, ತೊರೆಗಳು, ಕೆರೆಗಳು, ತಗ್ಗು ಪ್ರದೇಶಗಳು ಹಾಗೂ ಸಮುದ್ರ ತೀರಕ್ಕೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ: ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಹವಾಮಾನ ಸುಧಾರಿಸುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ಅಧಿಕಾರಿಗಳಿಗೆ ಕಡ್ದಾಯ ಕೇಂದ್ರಸ್ಥಾನ: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಪ್ರಧಾನ ಕಚೇರಿಗಳಲ್ಲೇ ಇದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ವಿಪತ್ತು ನಿರ್ವಹಣೆಗೆ ಸದಾ ಸಿದ್ಧರಿರಬೇಕು ಎಂದು ಡಿಸಿ ಆದೇಶಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *