ಕ್ರಿಕೆಟ್ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ! ಸಚಿನ್ ತೆಂಡೂಲ್ಕರ್ ಅವರ 37 ವರ್ಷಗಳ ಹಳೇ ದಾಖಲೆ ಉಡೀಸ್

ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಆರಂಭವಾಗುತ್ತಿದ್ದಂತೆ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಬಹುದಿನಗಳ ನಿರೀಕ್ಷೆಯಾಗಿದ್ದ ಯುವ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿಗೆ ಕೊನೆಗೂ ಭಾರತ ತಂಡದಲ್ಲಿ ಆಡಲು ಅವಕಾಶ ಸಿಕ್ಕಿದೆ. ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಟಿ20 ಪಂದ್ಯ ಆಡಲು ವೈಭವ್ ಮೈದಾನಕ್ಕಿಳಿಯುತ್ತಿದ್ದಂತೆ ಜಾಗತಿಕ ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆಯೊಂದು ಬರೆದಿದ್ದಾರೆ. ಭಾರತದ ಪರ ಅತಿ ಕಡಿಮೆ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ (Debutant) ಮಾಡಿದ ಆಟಗಾರ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಸೂರ್ಯವಂಶಿ ಪಾತ್ರರಾಗಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆ ಮುರಿದ ವೈಭವ್!

Advertisement

ಭಾರತ ತಂಡದ ಉಪನಾಯಕ ತಿಲಕ್ ವರ್ಮಾ ಅವರಿಂದ ಚೊಚ್ಚಲ ಅಂತರರಾಷ್ಟ್ರೀಯ ಕ್ಯಾಪ್ ಪಡೆದ ಎಡಗೈ ಬ್ಯಾಟ್ಸ್‌ಮನ್ ವೈಭವ್, ಭಾರತದ ಪರ ಟಿ20 ಆಡಿದ 122 ನೇ ಆಟಗಾರ ಎನಿಸಿಕೊಂಡರು. ಕೇವಲ 15 ವರ್ಷ 99 ದಿನಗಳ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಡುವ ಮೂಲಕ ವೈಭವ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ನವೆಂಬರ್ 15, 1989 ರಂದು ಕರಾಚಿಯಲ್ಲಿ ಪಾಕಿಸ್ತಾನ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯ ಆಡಿದ್ದರು. ಆಗ ಸಚಿನ್ ಅವರಿಗೆ 16 ವರ್ಷ 205 ದಿನಗಳಾಗಿತ್ತು. ಈಗ ಸಚಿನ್ ಅವರ ಈ ದಶಕಗಳ ಕಾಲದ ದಾಖಲೆಯನ್ನು ವೈಭವ್ ಇತಿಹಾಸದ ಪುಟ ಸೇರಿಸಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾ ಜೆರ್ಸಿ ತೊಟ್ಟು ಭಾವುಕರಾದ 15ರ ಹರೆಯದ ವೈಭವ್ ಸೂರ್ಯವಂಶಿ!; ವಿಡಿಯೋ ಹಂಚಿಕೊಂಡ ಬಿಸಿಸಿಐ

ಶೆಫಾಲಿ ವರ್ಮಾ ದಾಖಲೆಯೂ ಬ್ರೇಕ್:

ವೈಭವ್ ಸೂರ್ಯವಂಶಿ ಕೇವಲ ಪುರುಷರ ಕ್ರಿಕೆಟ್‌ನಲ್ಲಿ ಮಾತ್ರವಲ್ಲದೆ, ಇಡೀ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿನ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಇದಕ್ಕೂ ಮುನ್ನ ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟರ್ ಶೆಫಾಲಿ ವರ್ಮಾ ಅತ್ಯಂತ ಕಿರಿಯ ವಯಸ್ಸಿನಲ್ಲಿ ಪದಾರ್ಪಣೆ ಮಾಡಿದ ದಾಖಲೆ ಹೊಂದಿದ್ದರು. ಶೆಫಾಲಿ ಸೆಪ್ಟೆಂಬರ್ 24, 2019 ರಂದು ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 15 ವರ್ಷ 239 ದಿನದ ಪ್ರಾಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟಿದ್ದರು. ಆದರೆ ಈಗ ವೈಭವ್ ಮಹಿಳಾ ಕ್ರಿಕೆಟ್‌ನ ಈ ದಾಖಲೆಯನ್ನು ಸಹ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *