ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ನಿಧನ

ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ. ತಮ್ಮ ಸುಮಧುರ ಕಂಠದ ಮೂಲಕ ಹಲವು ದಶಕಗಳ ಕಾಲ ಸಂಗೀತ ಪ್ರಿಯರ ಮನಗೆದ್ದಿದ್ದ ಅವರು, ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಳ್ಳಿಯ ಸೊಗಡನ್ನು ಬಿಂಬಿಸುವ ಜನಪದ ಶೈಲಿಯ ಹಾಡುಗಳಿಂದ ಹಿಡಿದು ಭಾವಗೀತೆ, ಭಕ್ತಿಗೀತೆ ಹಾಗೂ ಚಲನಚಿತ್ರ ಗೀತೆಗಳವರೆಗೆ ಎಲ್ಲ ಪ್ರಕಾರಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಎಸ್. ಜಾನಕಿ ಅವರು, ಭಾರತೀಯ ಸಂಗೀತ ಕ್ಷೇತ್ರದಲ್ಲಿ ಅಳಿಯದ ಹೆಸರಾಗಿ ಉಳಿದಿದ್ದಾರೆ. ಅವರ ನಿಧನದಿಂದ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಎಸ್. ಜಾನಕಿ ಅವರ ಹೆಸರು ಸುವರ್ಣಾಕ್ಷರಗಳಲ್ಲಿ ಬರೆಯುವಂತದ್ದು. ಹಳ್ಳಿಯ ಸೊಗಡಿನ ಹಾಡುಗಳಿಂದ ಹಿಡಿದು ಎಲ್ಲಾ ಪ್ರಕಾರದ ಗೀತೆಗಳಿಗೂ ಧ್ವನಿಯಾಗಿದ್ದ ಇವರ ಮುಡಿಗೇರಿದ ಪ್ರಮುಖ ಪ್ರಶಸ್ತಿಗಳ ವಿವರ ಇಲ್ಲಿದೆ.

ಸಂಗೀತ ಲೋಕಕ್ಕೆ ನೀಡಿದ ಅತ್ಯುನ್ನತ ಕೊಡುಗೆಗಾಗಿ ಇವರಿಗೆ ಒಟ್ಟು 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಒಲಿದು ಬಂದಿವೆ. ವಿವಿಧ ಭಾಷೆಗಳ ಚಿತ್ರರಂಗದಲ್ಲಿ ಗಾಯನಕ್ಕಾಗಿ ಬರೋಬ್ಬರಿ 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಹೆಗ್ಗಳಿಕೆ ಇವರದ್ದಾಗಿದೆ.

ಇದನ್ನೂ ಓದಿ: ಅಂಬೆಗಾಲಿಡುವ ವಯಸ್ಸಲ್ಲೇ ನೊಬೆಲ್ ವರ್ಲ್ಡ್ ರೆಕಾರ್ಡ್: ವಿಜಯಪುರದ 10 ತಿಂಗಳ ಮಗುವಿನ ಸಾಧನೆ; 21 ಮೆಟ್ಟಿಲು ಹತ್ತಲು ತಗೊಂಡಿದ್ದು ಜಸ್ಟ್ 36 ಸೆಕೆಂಡ್

ಮೈಸೂರು ವಿಶ್ವವಿದ್ಯಾಲಯವು ಎಸ್. ಜಾನಕಿ ಅವರ ಸಾಧನೆಯನ್ನು ಗೌರವಿಸಿ ಗೌರವ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಿತ್ತು. ಕರ್ನಾಟಕ ಸರ್ಕಾರದಿಂದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಹಾಗೂ ತಮಿಳುನಾಡು ರಾಜ್ಯ ಸರ್ಕಾರದಿಂದ ಅತ್ಯುನ್ನತ ‘ಕಲೈಮಾಮಣಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2013ರಲ್ಲಿ ಕೇಂದ್ರ ಸರ್ಕಾರವು ಇವರಿಗೆ ದೇಶದ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *