ನ್ಯೂಜಿಲ್ಯಾಂಡ್‌ ವಿರುದ್ಧ ಕೆಎಲ್ ರಾಹುಲ್ ವಿಶೇಷ ಸಾಧನೆ, ಸಚಿನ್ ದಾಖಲೆ ಮುರಿದ ಕೊಹ್ಲಿ

KL Rahul's Century special achievement against New Zealand Kohli breaks Sachin's record

ರಾಜ್‌ಕೋಟ್: ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್ ಅವರು ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ನ್ಯೂಜಿಲೆಂಡ್ ವಿರುದ್ಧ ಏಕದಿನದಲ್ಲಿ ಶತಕ ಗಳಿಸಿದ ಭಾರತದ ಮೊದಲ ವಿಕೆಟ್ ಬ್ಯಾಟರ್ ಎನಿಸಿದ್ದಾರೆ. ಇದರೊಂದಿಗೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಅವರನ್ನೇ ಮೀರಿಸಿದ್ದಾರೆ.

ಈ ಶತಕದ ಮೂಲಕ ಏಕದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಅವರು ಒಟ್ಟು ೮ ಶತಕಗಳನ್ನು ಗಳಿಸಿದ್ದಾರೆ. ವಿಕೆಟ್ ಕೀಪರ್ ಆಗಿ ೩ನೇ ಶತಕ ಬಾರಿಸಿದ್ದಾರೆ.

Advertisement

ವಿರಾಟ್ ಕೊಹ್ಲಿ ವಿಕೆಟ್ ಪತನಗೊಂಡಾಗ ಭಾರತ ೧೧೮ಕ್ಕೆ ನಾಲ್ಕು ವಿಕೆಟ್ ಕಳೆದಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ತಂಡಕ್ಕೆ ಆಸರೆಯಾಗಿ ನಿಂತ ರಾಹುಲ್ ಆಕರ್ಷಕ ಶತಕ ಗಳಿಸಿದ್ದರಲ್ಲದೆ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ಅದರಂತೆ, ಎದುರಿಸಿದ ೯೨ ಎಸೆತಗಳಲ್ಲಿ ೧೧ ಬೌಂಡರಿ ಹಾಗೂ ಒಂದು ಸಿಕ್ಸರ್ ಬಾರಿಸಿ ೧೧೨ ರನ್ ಗಳಿಸಿ ಅಜೇಯರಾಗಿ ಉಳಿದರು. ಒಟ್ಟಾರೆಯಾಗಿ ಭಾರತ ಏಳು ವಿಕೆಟ್ ನಷ್ಟಕ್ಕೆ ೨೮೪ ರನ್ ಪೇರಿಸಿತು.

ಇದನ್ನೂ ಓದಿ: ನಾಲ್ಕು ವರ್ಷದ ನಂತರ ಅಗ್ರಸ್ಥಾನಕ್ಕೆ ಏರಿದ ವಿರಾಟ್ ಕೊಹ್ಲಿ

Advertisement

ಸಚಿನ್ ದಾಖಲೆ ಮುರಿದ ಕೊಹ್ಲಿ

ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಬ್ಯಾಟರ್ ವಿರಾಟ್ ಕೊಹ್ಲಿ ಅವರು ೨೩ ರನ್ ಬಾರಿಸಿದರೂ ಸಾಧನೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಅಲ್ಲದೆ, ಸಚಿನ್ ತಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ೪೨ ಏಕದಿನ ಪಂದ್ಯಗಳಲ್ಲಿ ಸಚಿನ್ ೧೭೫೦ ರನ್ ಗಳಿಸಿದ್ದರು. ಆದರೆ, ಕೊಹ್ಲಿ, ೩೫ನೇ ಪಂದ್ಯದಲ್ಲಿ ಈ ರನ್ ದಾಟಿ ಸಚಿನ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು