ಅಡಿಕೆ ಬೆಳೆಗಾರರಿಗೆ ಅನ್ಯಾಯ: 16 ರೂ. ಪರಿಹಾರ ಘೋಷಣೆ ಖಂಡಿಸಿದ ಆರ್. ಅಶೋಕ

ಬೆಂಗಳೂರು: ಅಡಿಕೆ ಬೆಳೆಗಾರರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಅಡಿಕೆ ತೋಟಕ್ಕೆ ಹಾನಿಯಾದ ಒಂದು ಮರಕ್ಕೆ ಕೇವಲ ₹16 ಪರಿಹಾರ ನಿಗದಿಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ ರೈಲು ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: 26.18 ಕೋಟಿ ರೂ. ವೆಚ್ಚದ ನೂತನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ವರ್ಷಕ್ಕೆ ಸಾವಿರಾರು ರೂಪಾಯಿ ಆದಾಯ ನೀಡುವ ಅಡಿಕೆ ಮರ ಹಾನಿಗೀಡಾದರೂ ಕೇವಲ ₹16 ಪರಿಹಾರ ಘೋಷಿಸಿರುವುದು ರೈತರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ದಿಢೀರ್ ಭೇಟಿ

ಮುಖ್ಯಮಂತ್ರಿ ಹಾಗೂ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ ಅಶೋಕ, ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಿಲ್ಲದಿದ್ದರೆ ಅದನ್ನು ಸ್ಪಷ್ಟವಾಗಿ ತಿಳಿಸಬೇಕು. ಅದನ್ನು ಬಿಟ್ಟು ಇಂತಹ ಅಲ್ಪ ಪ್ರಮಾಣದ ಪರಿಹಾರ ಘೋಷಿಸುವ ಮೂಲಕ ಅಡಿಕೆ ಬೆಳೆಗಾರರ ಆತ್ಮಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.

ರೈತರ ಶ್ರಮಕ್ಕೆ ಗೌರವ ದೊರೆಯಬೇಕು ಮತ್ತು ಬೆಳೆ ನಷ್ಟಕ್ಕೆ ನ್ಯಾಯಸಮ್ಮತ ಪರಿಹಾರ ಸಿಗಬೇಕು. ರಾಜ್ಯ ಸರ್ಕಾರ ಕೂಡಲೇ ಈ ಪರಿಹಾರದ ಮೊತ್ತವನ್ನು ಮರುಪರಿಶೀಲಿಸಿ ಸಮರ್ಪಕ ಪರಿಹಾರ ಘೋಷಿಸಬೇಕು ಎಂದು ಆರ್. ಅಶೋಕ ಒತ್ತಾಯಿಸಿದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *