ODI: ರೋಹಿತ್ ಶರ್ಮಾ ಸ್ಫೋಟಕ ಶತಕ ವ್ಯರ್ಥ; ಭಾರತ ವಿರುದ್ಧ ಇಂಗ್ಲೆಂಡ್‌ಗೆ 27 ರನ್‌ಗಳ ಗೆಲುವು

ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಭಾರತದ ವಿರುದ್ಧ 27 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, 50 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 387 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಆರಂಭಿಕ ಬ್ಯಾಟರ್ ಬೆನ್ ಡಕೆಟ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ 135 ಎಸೆತಗಳಲ್ಲಿ 18 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 141 ರನ್ ಗಳಿಸಿದರು.

ಜಾಕೋಬ್ ಬೆಥೆಲ್ 91 ರನ್, ಜೋ ರೂಟ್ 74 ರನ್, ಜೋಸ್ ಬಟ್ಲರ್ ಅಜೇಯ 41 ರನ್ ಹಾಗೂ ಹ್ಯಾರಿ ಬ್ರೂಕ್ 14 ರನ್‌ಗಳ ಕೊಡುಗೆ ನೀಡಿದರು. ಭಾರತದ ಪರ ಪ್ರಸಿದ್ಧ್ ಕೃಷ್ಣ 2 ವಿಕೆಟ್ ಪಡೆದರೆ, ಪ್ರಿನ್ಸ್ ಯಾದವ್ 1 ವಿಕೆಟ್ ಕಬಳಿಸಿದರು.

ಇದನ್ನೂ ಓದಿ: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಭರ್ಜರಿ ಆರಂಭ; 192 ರನ್‌ಗಳ ದಾಖಲೆಯ ಜೊತೆಯಾಟಕ್ಕೆ ಪ್ರಸಿದ್ಧ್ ಕೃಷ್ಣ ಬ್ರೇಕ್

388 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಭಾರತ ಉತ್ತಮ ಹೋರಾಟ ನಡೆಸಿದರೂ, 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 360 ರನ್‌ಗಳಿಗೆ ಸೀಮಿತವಾಯಿತು. ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 110 ಎಸೆತಗಳಲ್ಲಿ 17 ಬೌಂಡರಿ ಹಾಗೂ 5 ಸಿಕ್ಸರ್‌ಗಳೊಂದಿಗೆ 138 ರನ್ ಸಿಡಿಸಿದರು.

ಶುಭ್ಮನ್ ಗಿಲ್ 77, ವಿರಾಟ್ ಕೊಹ್ಲಿ 74 ರನ್‌ಗಳೊಂದಿಗೆ ಉತ್ತಮ ಬೆಂಬಲ ನೀಡಿದರು. ಇಶಾನ್ ಕಿಶನ್ 14, ಕೆ.ಎಲ್. ರಾಹುಲ್ 12, ಅಕ್ಷರ್ ಪಟೇಲ್ 2, ಗುರ್‌ನೂರ್ ಬ್ರಾರ್ ಅಜೇಯ 18 ಹಾಗೂ ಅರ್ಶದೀಪ್ ಸಿಂಗ್ ಅಜೇಯ 15 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾದರು.

ಇಂಗ್ಲೆಂಡ್ ಪರ ಸ್ಯಾಮ್ ಕರನ್ 4 ವಿಕೆಟ್ ಪಡೆದು ಭಾರತದ ಗೆಲುವಿನ ಆಸೆಗೆ ದೊಡ್ಡ ಹೊಡೆತ ನೀಡಿದರು. ಜಾಕೋಬ್ ಬೆಥೆಲ್, ಆದಿಲ್ ರಶೀದ್ ಹಾಗೂ ಜೋಫ್ರಾ ಆರ್ಚರ್ ತಲಾ ಒಂದು ವಿಕೆಟ್ ಪಡೆದು ಇಂಗ್ಲೆಂಡ್‌ನ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ