ನಾನು 56 ವರ್ಷದ ಯುವಕನ ಬಗ್ಗೆ ಮಾತನಾಡುತ್ತಿಲ್ಲ: ರಾಹುಲ್ ಗಾಂಧಿಯ ಕಿವಿ ಹಿಂಡಿದ ಮೋದಿ

ದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಹೈದರಾಬಾದ್ ಮೂಲದ ಖಾಸಗಿ ಬಾಹ್ಯಾಕಾಶ ಸ್ಟಾರ್ಟ್‌ಅಪ್ ‘ಸ್ಕೈರೂಟ್ ಏರೋಸ್ಪೇಸ್’ (Skyroot Aerospace) ಸಾಧನೆಯನ್ನು ಕೊಂಡಾಡುವ ನೆಪದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಸರನ್ನು ಎಲ್ಲೂ ಪ್ರಸ್ತಾಪಿಸದೆ ಪರೋಕ್ಷವಾಗಿ ತೀವ್ರ ಟಾಂಗ್ ನೀಡಿದ್ದಾರೆ.

ಖಾಸಗಿ ಬಾಹ್ಯಾಕಾಶ ಸಂಸ್ಥೆ ಸ್ಕೈರೂಟ್ ಸಾಧಿಸಿದ ರಾಕೆಟ್ ಉಡಾವಣೆಯ ಐತಿಹಾಸಿಕ ಯಶಸ್ಸನ್ನು ವಿಶದವಾಗಿ ಸ್ಮರಿಸಿದ ಪ್ರಧಾನಿ ಮೋದಿ, ದೇಶದ ಯುವ ಶಕ್ತಿಯನ್ನು ಶ್ಲಾಘಿಸಿದರು. “ಸ್ಕೈರೂಟ್ ಸ್ಟಾರ್ಟ್‌ಅಪ್‌ನ ಇಡೀ ತಂಡದ ಸರಾಸರಿ ವಯಸ್ಸು ಕೇವಲ 28 ವರ್ಷಗಳು. ನಾನು ಇಲ್ಲಿ ಯಾವುದೇ 56 ವರ್ಷದ ಯುವಕನ ಬಗ್ಗೆ ಮಾತನಾಡುತ್ತಿಲ್ಲ. ಬಾಹ್ಯಾಕಾಶದಲ್ಲಿ ಭಾರತದ ಧ್ವಜವನ್ನು ನೆಟ್ಟ ನೈಜ ಯುವಕರ ಬಗ್ಗೆ ಮಾತನಾಡುತ್ತಿದ್ದೇನೆ.” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು, “ನಮ್ಮ ಯುವಕರ ಸಾಮರ್ಥ್ಯ ಮತ್ತು ಆಕಾಂಕ್ಷೆಗಳು ಬಾಹ್ಯಾಕಾಶದಷ್ಟೇ ಅಪರಿಮಿತವಾಗಿವೆ ಎಂಬುದಕ್ಕೆ ಇದೊಂದು ಸ್ಪಷ್ಟ ಸಂದೇಶ. ದೇಶವು ಈಗ ಸುಧಾರಣೆಯ ಎಕ್ಸ್‌ಪ್ರೆಸ್ ರೈಲನ್ನು ಹತ್ತಿದೆ, ಅದಕ್ಕಾಗಿಯೇ ಭಾರತೀಯ ಯುವಕರು ಇಂತಹ ಅದ್ಭುತಗಳನ್ನು ಮಾಡಲು ಸಾಧ್ಯವಾಗುತ್ತಿದೆ” ಎಂದರು.

ಇದನ್ನೂ ಓದಿ: ಮುಂಗಾರು ಅಧಿವೇಶನ: ಜಾಗತಿಕ ಯುದ್ಧದ ನಡುವೆಯೂ ಭಾರತದ ಆರ್ಥಿಕತೆ ಬಲಿಷ್ಠ, ಶೇ. 7.7 ರಷ್ಟು ಪ್ರಗತಿ
ಇದೇ ವೇಳೆ ಸಂಸತ್ತಿನ ಕಲಾಪಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನವನ್ನು ಸುಗಮವಾಗಿ ನಡೆಸಲು ಸಹಕರಿಸುವಂತೆ ಎಲ್ಲಾ ಸಂಸದರಿಗೆ ಕರೆ ನೀಡಿದರು. “ದೇಶವು ವೇಗವಾಗಿ ಮುನ್ನಡೆಯುತ್ತಿರುವ ಇಂತಹ ಸಮಯದಲ್ಲಿ ಸಂಸತ್ತಿನ ಸುಗಮ ಕಾರ್ಯನಿರ್ವಹಣೆಯು ದೇಶಕ್ಕೆ ಹೊಸ ಶಕ್ತಿಯನ್ನು ತುಂಬುತ್ತದೆ. ದೇಶದ ಗುರಿಗಳನ್ನು ತಲುಪಲು ರಚನಾತ್ಮಕ ಮನೋಭಾವ ಅತ್ಯಗತ್ಯ” ಎಂದು ಅವರು ಅಭಿಪ್ರಾಯಪಟ್ಟರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *