ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ದರ್ಶನ್ ಅವರು ಜುಲೈ 25 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳು ಸೇರಿದಂತೆ), ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 12ನೇ ತರಗತಿ ವಿದ್ಯಾರ್ಥಿಗಳಿಗೂ (ಎಲ್ಲಾ ವಸತಿ ಕಾಲೇಜುಗಳು ಸೇರಿದಂತೆ), ಹಾಗೆಯೇ ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (ಎಲ್ಲಾ ವಸತಿ ಕಾಲೇಜುಗಳು ಸೇರಿದಂತೆ) ರಜೆ ಅನ್ವಯವಾಗಲಿದೆ.
ಇದನ್ನೂ ಓದಿ:Dakshina Kannada : ದ.ಕ., ಉಡುಪಿ ಸೇರಿ ರಾಜ್ಯದ 11 ಕಡಲತೀರಗಳಿಗೆ ಬ್ಲೂ ಫ್ಲ್ಯಾಗ್ ಮಾನ್ಯತೆ
ಮಳೆಯ ತೀವ್ರತೆ ಹೆಚ್ಚಿರುವ ಕಾರಣ ತಾಸು/ತಗ್ಗು ಪ್ರದೇಶಗಳು ಹಾಗೂ ನದಿ ತೀರಕ್ಕೆ ತೆರಳದಂತೆ ಮತ್ತು ಅಗತ್ಯವಿಲ್ಲದೆ ಹೊರಗಡೆ ಸಂಚರಿಸದಂತೆ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

