ನೀಟ್ ಅಕ್ರಮಕ್ಕೆ ಕೇಂದ್ರದ ಕಟ್ಟುನಿಟ್ಟಿನ ಸರ್ಜರಿ: CJP ಪ್ರತಿಭಟನೆ ಬೆನ್ನಲ್ಲೇ NTA ಯಿಂದ 47 ಅಧಿಕಾರಿಗಳು ದಿಢೀರ್ ವಜಾ

ದೇಶಾದ್ಯಂತ ಸೃಷ್ಟಿಯಾಗಿರುವ ನೀಟ್ ಯುಜಿ (NEET UG) ಪರೀಕ್ಷಾ ಅಕ್ರಮದ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳು ಮುಂದುವರಿದಿವೆ.

ಈ ಬೆನ್ನಲ್ಲೇ ದೇಶದ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸಲು ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಠಿಣ ಕ್ರಮಗಳಿಗೆ ಮುಂದಾಗಿವೆ.

ಪರೀಕ್ಷಾ ಸಂಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸುವ (Overhaul) ಬೃಹತ್ ಕಾರ್ಯಾಚರಣೆಯ ಭಾಗವಾಗಿ, ಎನ್‌ಟಿಎ ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದೆ.

ಇದನ್ನೂ ಓದಿ:NEET ಪೇಪರ್ ಸೋರಿಕೆ ಪ್ರತಿಭಟನೆ: 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್

ವಜಾಗೊಂಡ ಅಧಿಕಾರಿಗಳಲ್ಲಿ ಕೆಲವರ ವಿರುದ್ಧ ಇಲಾಖಾ ತನಿಖೆಯಷ್ಟೇ ಅಲ್ಲದೆ, ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *