ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ರಾಷ್ಟ್ರವಿರೋಧಿ ಶಕ್ತಿಗಳು ಪರಿಸ್ಥಿತಿಯ ದುರುಪಯೋಗ ಪಡಿಸಿಕೊಳ್ಳಬಾರದೆಂದು ನಿರ್ಧಾರ

ದೆಹಲಿ: ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿದ್ದ ತೀವ್ರ ಪ್ರತಿಭಟನೆ ಹಾಗೂ ಗಡುವಿನ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿಯವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ತಮ್ಮ ನಿರ್ಧಾರದ ಕಾರಣವನ್ನು ಹೀಗೆ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ವೀಡಿಯೋಗೆ ಯುವಜನತೆಯ ಅಪಾರ ಸ್ಪಂದನೆ: ‘ಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

“ಜಂತರ್ ಮಂತರ್‌ನಲ್ಲಿ ಹಾಗೂ ದೇಶಾದ್ಯಂತ ನಿರ್ಮಾಣವಾಗಿರುವ ಈ ಪರಿಸ್ಥಿತಿಯನ್ನು ರಾಷ್ಟ್ರವಿರೋಧಿ ಶಕ್ತಿಗಳು (anti-national elements) ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳಬಾರದು, ದೇಶದ ಒಗ್ಗಟ್ಟು ಕಾಪಾಡಲ್ಪಡಬೇಕು ಹಾಗೂ ಭಾರತದ ವಿದ್ಯಾರ್ಥಿಗಳು ಕಾನೂನು ತೊಡಕುಗಳಲ್ಲಿ ಸಿಲುಕಿಕೊಳ್ಳದೇ ತಮ್ಮ ವ್ಯಾಸಂಗ ಮತ್ತು ಭವಿಷ್ಯದ ಕಡೆಗೆ ಗಮನಹರಿಸಬೇಕು ಎಂಬ ಉದ್ದೇಶದಿಂದ ನಾನು ನನ್ನ ರಾಜೀನಾಮೆಯನ್ನು ಪ್ರಧಾನಮಂತ್ರಿಯವರಿಗೆ ಸಲ್ಲಿಸಿದ್ದೇನೆ.”

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *