ದೆಹಲಿ: ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳ ಚಳವಳಿ ತೀವ್ರಗೊಂಡ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೆ ರವಾನಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿರುವ ಭಾವನಾತ್ಮಕ ಹಾಗೂ ಮಹತ್ವದ ಸಾಲುಗಳು ಇಲ್ಲಿವೆ.
“ಜಂತರ್ ಮಂತರ್‌ನಲ್ಲಿ ಹಾಗೂ ದೇಶಾದ್ಯಂತ ನಿರ್ಮಾಣವಾಗಿರುವ ಈ ಪರಿಸ್ಥಿತಿಯನ್ನು ರಾಷ್ಟ್ರವಿರೋಧಿ ಶಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳಬಾರದು, ದೇಶದ ಒಗ್ಗಟ್ಟು ಎಂದಿನಂತೆ ಕಾಯ್ದುಕೊಳ್ಳಲ್ಪಡಬೇಕು, ಭಾರತದ ಯಾವುದೇ ವಿದ್ಯಾರ್ಥಿಯ ಭವಿಷ್ಯ ಕಾನೂನು ತೊಡಕುಗಳಲ್ಲಿ ಸಿಲುಕಿಕೊಳ್ಳದೇ, ಅವರು ತಮ್ಮ ಅಭ್ಯಾಸ ಮತ್ತು ವೃತ್ತಿಜೀವನವನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂಬ ಏಕೈಕ ಉದ್ದೇಶದಿಂದ ನಾನು ಪ್ರಧಾನಮಂತ್ರಿಯವರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ.”
ಪರೀಕ್ಷಾ ಅಕ್ರಮದ ಗೊಂದಲದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂದು ಸಚಿವರು ಪತ್ರದಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ. ಈ ಸನ್ನಿವೇಶವನ್ನು ದುಷ್ಟಶಕ್ತಿಗಳು ದುರ್ಬಳಕೆ ಮಾಡಿಕೊಳ್ಳಬಾರದು ಎಂಬ ಕಾರಣಕ್ಕೆ ರಾಜೀನಾಮೆ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದರು.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

