ದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ಇದರ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶಿಫಾರಸಿನ ಮೇರೆಗೆ ಕೇಂದ್ರದ ಹಿರಿಯ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರಿಗೆ ಮಹತ್ವದ ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.
ಪ್ರಸ್ತುತ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು, ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗ ಪ್ರಲ್ಹಾದ್ ಜೋಶಿ ಅವರಿಗೆ ಈಗ ಶಿಕ್ಷಣ ಖಾತೆಯನ್ನೂ ಹೆಚ್ಚುವರಿಯಾಗಿ ನೀಡಲಾಗಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

