ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ರಾಜ್ಯ ಸರ್ಕಾರ ತೀರ್ಮಾನ

ದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶವನ್ನು ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಷಯವನ್ನು ಸ್ಪಷ್ಟಪಡಿಸಿದರು. “ಈ ಬಾರಿ ರಾಜ್ಯದಲ್ಲಿ ವರುಣನ ಕೃಪೆ ಇಲ್ಲದೆ ಜಲಾಶಯಗಳಲ್ಲಿ ನೀರಿನ ಅಭಾವ ತೀವ್ರವಾಗಿದೆ. ಹೀಗಾಗಿ CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಸಚಿವ ರಾಮಲಿಂಗಾರೆಡ್ಡಿ, ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿಂದೆ ಸಮಿತಿಯು ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು ಎಂಬುದನ್ನು ನಾವು ಗಮನಿಸಬೇಕಿದೆ,” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

https://g1news.in/category/politics/
ಬೆಂಗಳೂರಿಗೆ ಮರಳಿದ ನಂತರ ಈ ಕುರಿತು ವಿರೋಧ ಪಕ್ಷದ ನಾಯಕರೊಂದಿಗೂ ಸಮಾಲೋಚನೆ ನಡೆಸಲಾಗುವುದು ಎಂದು ಅವರು ತಿಳಿಸಿದರು. ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಅವರು ಈ ವಿಷಯವಾಗಿ ಚರ್ಚಿಸಲು ಇಂಗಿತ ವ್ಯಕ್ತಪಡಿಸಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ದೂರವಾಣಿ ಮೂಲಕವೂ ಮಾತನಾಡಿದ್ದಾರೆ ಎಂದು ಡಿಸಿಎಂ ತಿಳಿಸಿದರು.

ಇದನ್ನೂ ಓದಿ: “ಅಕ್ರಮ ವಲಸಿಗರನ್ನು ಬಿಟ್ಟು ದೂರುದಾರನನ್ನೇ ಬಂಧಿಸ್ತೀರಾ?”: ಕರ್ನಾಟಕ ಗೃಹ ಇಲಾಖೆಗೆ ಹೈಕೋರ್ಟ್ ತೀವ್ರ ತರಾಟೆ

“ನಮ್ಮ ರಾಜ್ಯಕ್ಕೆ ಬರುವ ಅತಿಥಿಗಳನ್ನು ಗೌರವದಿಂದ ಸ್ವೀಕರಿಸುವುದು ನಮ್ಮ ಕರ್ತವ್ಯ. ಹೀಗಾಗಿ ಅವರಿಗೆ ಸೂಕ್ತ ಗೌರವ ನೀಡಿ, ಸಭೆಗೆ ಬನ್ನಿ ಎಂದು ಆಹ್ವಾನಿಸಲಾಗಿದೆ. ಅದಕ್ಕೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೊತೆಗೆ, ನಮ್ಮ ಕಾವೇರಿ ಜಲಾನಯನ ಪ್ರದೇಶದ ಕ್ಷಾಮದ ಪರಿಸ್ಥಿತಿಯನ್ನು ಖುದ್ದಾಗಿ ಬಂದು ವೀಕ್ಷಿಸುವಂತೆ ತಮಿಳುನಾಡು ಸಿಎಂ ವಿಜಯ್ ಅವರಿಗೆ ಮನವಿ ಮಾಡಿದ್ದೇವೆ. ಅವರಿಗೆ ವಾಸ್ತವ ಪರಿಸ್ಥಿತಿಯ ಅನುಭವವಾಗಲಿ ಎಂದು ಹೆಲಿಕಾಪ್ಟರ್ ವ್ಯವಸ್ಥೆ ಕಲ್ಪಿಸಲೂ ನಾವು ಸಿದ್ಧರಿದ್ದೇವೆ,” ಎಂದು ಅವರು ಹೇಳಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *