ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda Murder Case) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ದೋಷಿ ಎಂದು ತೀರ್ಪು ಪಡೆದಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ಶುಕ್ರವಾರ (ಜುಲೈ 31) ಬಿಗ್ ರಿಲೀಫ್ ಸಿಕ್ಕಿದೆ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜ ಅವರಿದ್ದ ವಿಭಾಗೀಯ ಪೀಠವು ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಅವರ ಮೇಲಿದ್ದ ‘ದೋಷಿ’ ತೀರ್ಪಿಗೂ ತಡೆಯಾಜ್ಞೆ ನೀಡಿದ್ದು, ಇದರಿಂದಾಗಿ ವಿನಯ್ ಕುಲಕರ್ಣಿ ಅವರ ರದ್ದಾಗಿದ್ದ ಶಾಸಕ ಸ್ಥಾನ ಮತ್ತೆ ಮರುಸ್ಥಾಪನೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.
ಇದನ್ನೂ ಓದಿ: ಸಂಸದರಾದ್ರೂ ಬಿಗುವಿಲ್ಲ, ಸಾಮಾನ್ಯ ಪ್ರಜೆಯ ಕರೆಗೆ ಸ್ಪಂದನೆ: ರಾಜಕೀಯ ಕ್ಷೇತ್ರದಲ್ಲಿ ನೈಜ ಭರವಸೆ ಕೋಟ
ವಿನಯ್ ಕುಲಕರ್ಣಿ ಅವರಷ್ಟೇ ಅಲ್ಲದೆ, ಈ ಪ್ರಕರಣದಲ್ಲಿದ್ದ ಇತರ 9 ಮಂದಿ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ನೀಡಿದೆ. ಚಂದ್ರಶೇಖರ ಇಂಡಿ (ಚಂದು ಮಾಮ), ದಿನೇಶ್, ಅಶ್ವತ್ಥ್, ಸುನಿಲ್, ನಜೀರ್ ಅಹ್ಮದ್, ಷಾನವಾಜ್, ನೂತನ್, ಹರ್ಷಿತ್ ಹಾಗೂ ಚನ್ನಕೇಶವ ಟಿಂಗರಿಕರ್ಗೆ ಕೋರ್ಟ್ ರಿಲೀಫ್ ನೀಡಿದೆ.
ವಿಚಾರಣಾ ನ್ಯಾಯಾಲಯದ ಶಿಕ್ಷೆಯ ಆದೇಶ ಹಾಗೂ ದೋಷಿ ತೀರ್ಪಿಗೆ ಉನ್ನತ ನ್ಯಾಯಾಲಯ ತಡೆ ನೀಡಿರುವುದರಿಂದ, ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ವಿನಯ್ ಕುಲಕರ್ಣಿ ಅವರ ಅನರ್ಹತೆ ತೆರವುಗೊಂಡು, ಶಾಸಕ ಸ್ಥಾನ ಮರುಕಳಿಸುವ ಹಾದಿ ಸುಗಮವಾದಂತಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

