ಎನ್‌ಎಸ್‌ಎ ಅಜಿತ್ ಡೋವಲ್‌ಗೆ ‘ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ’ ಪ್ರಧಾನ ಮಾಡಿದ ಗೃಹ ಸಚಿವ ಅಮಿತ್ ಶಾ

ಪುಣೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ (NSA) ಅಜಿತ್ ಡೋವಲ್ ಅವರಿಗೆ ಪ್ರತಿಷ್ಠಿತ ‘ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ’ (Lokmanya Tilak National Award) ನೀಡಿ ಗೌರವಿಸಿದರು.

ಮಹಾರಾಷ್ಟ್ರದ ಪುಣೆಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಸಮಾರಂಭದಲ್ಲಿ ಅಜಿತ್ ಡೋವಲ್ ಅವರ ದೇಶಸೇವೆ ಹಾಗೂ ಭಾರತದ ರಾಷ್ಟ್ರೀಯ ಭದ್ರತೆಗೆ ನೀಡಿರುವ ಅಪ್ರತಿಮ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ರಾಜ್ಯ ಸರ್ಕಾರ ತೀರ್ಮಾನ

ಭಾರತದ ಭದ್ರತಾ ಕ್ಷೇತ್ರದಲ್ಲಿ ಹಾಗೂ ವಿದೇಶಾಂಗ ನೀತಿ ಬಲಪಡಿಸುವಲ್ಲಿ ಎನ್‌ಎಸ್‌ಎ ಅಜಿತ್ ಡೋವಲ್ ವಹಿಸಿದ ಪಾತ್ರವನ್ನು ಗೃಹ ಸಚಿವ ಅಮಿತ್ ಶಾ ಅವರು ಮುಕ್ತಕಂಠದಿಂದ ಶ್ಲಾಘಿಸಿದರು. ದೇಶದ ರಕ್ಷಣೆ, ದೇಶಪ್ರೇಮ ಹಾಗೂ ಸಮುದಾಯದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಶ್ರೇಷ್ಠ ವ್ಯಕ್ತಿಗಳಿಗೆ ಪ್ರತಿವರ್ಷ ತಿಲಕ್ ಸ್ಮಾರಕ ಸ್ವರಾಜ್ಯ ಸಂಘದ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಪುಣೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಹಲವು ಪ್ರಮುಖ ನಾಯಕರು, ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *