ದಕ್ಷಿಣ ಕನ್ನಡದಲ್ಲಿ ಉಕ್ಕಿ ಹರಿವ ನೇತ್ರಾವತಿ: ಬಂಟ್ವಾಳ ತಾಲೂಕಿನಾದ್ಯಂತ ಜಲಾವೃತ, ನೆರೆ ಭೀತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಎಎಮ್‌ಆರ್ (AMR) ಶಂಭೂರು ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ಬಂಟ್ವಾಳ ತಾಲೂಕಿನ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.

ರಾತ್ರಿಯಾಗುತ್ತಿದ್ದಂತೆ ನೇತ್ರಾವತಿ ನದಿಯ ಪ್ರವಾಹದ ನೀರು ಜನವಸತಿ ಪ್ರದೇಶಗಳು ಹಾಗೂ ಅಂಗಡಿ ಮುಂಗಟ್ಟುಗಳಿಗೆ ನುಗ್ಗುತ್ತಿದ್ದು, ಸ್ಥಳೀಯ ವರ್ತಕರು ಮತ್ತು ನಾಗರಿಕರು ತೀವ್ರ ಆತಂಕದಲ್ಲಿದ್ದಾರೆ. ನೇತ್ರಾವತಿ ನದಿಯ ನೀರಿನ ಮಟ್ಟ ದಿಢೀರ್ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಈ ಕೆಳಗಿನ ಗ್ರಾಮಗಳು ಹಾಗೂ ಪೇಟೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ವಿಶಾಲ್‌ಗೆ ಅರುಣ ಸಾರಥಿ ಸಂಘಟನೆಯಿಂದ ಧನಸಹಾಯ

ಇಲ್ಲಿದೆ ನೋಡಿ ವಿಡಿಯೋ:

ಬಂಟ್ವಾಳ ಪೇಟೆ ಹಾಗೂ ಪಾಣೆಮಂಗಳೂರು ಭಾಗದ ಅಂಗಡಿ ಮುಂಗಟ್ಟುಗಳಿಗೆ ನದಿ ನೀರು ನುಗ್ಗಲು ಪ್ರಾರಂಭಿಸಿದ ಹಿನ್ನೆಲೆಯಲ್ಲಿ ವರ್ತಕರು ರಾತ್ರೋರಾತ್ರಿ ತಮ್ಮ ಸರಕು ಹಾಗೂ ಬೆಲೆಬಾಳುವ ಸಾಮಗ್ರಿಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸುತ್ತಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *