ಉತ್ತರಕನ್ನಡ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಾಂಡೇಲಿ ತಾಲೂಕಿನಲ್ಲಿ ಅಪಾಯಕಾರಿ ಘಟನೆಯೊಂದು ನಡೆದಿದೆ. ದಾಂಡೇಲಿ ನಗರದ ಹಳೆದಾಂಡೇಲಿಯ ಮಸೀದಿ ಗಲ್ಲಿ ಪ್ರದೇಶದಲ್ಲಿ ನೆಲೆಸಿರುವ ಹಸನ್ ಯೂಸೂಫ್ ಶೇಖ್ ಎಂಬುವವರ ಮನೆಯ ಗೋಡೆಯು ಮಳೆಯ ಆರ್ಭಟಕ್ಕೆ ದಿಢೀರನೆ ಕುಸಿದು ಬಿದ್ದಿದೆ.
ಅದೃಷ್ಟವಶಾತ್ ಮನೆಯಲ್ಲಿದ್ದ ಇಬ್ಬರು ವೃದ್ಧೆಯರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಗೋಡೆ ಕುಸಿದುಬಿದ್ದ ರಭಸಕ್ಕೆ ಮನೆಯಲ್ಲಿದ್ದ ಇಬ್ಬರು ವೃದ್ಧೆಯರಿಗೆ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರಿಗೆ ತಕ್ಷಣವೇ ಅಗತ್ಯ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ:‘ಗಡಾಯಿಕಲ್ಲು’ ಚಾರಣಕ್ಕೆ ತಾತ್ಕಾಲಿಕ ನಿಷೇಧ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ, ಗುಡ್ಡ ಕುಸಿತ ಆಗುವ ಸಾಧ್ಯತೆ
ಘಟನೆಯಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ದಿನಬಳಕೆಯ ವಸ್ತುಗಳು ಹಾಗೂ ಗೃಹೋಪಯೋಗಿ ಸಾಮಗ್ರಿಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ.ಸತತವಾಗಿ ಮಳೆ ಮುಂದುವರಿಯುತ್ತಿರುವುದರಿಂದ ಹಳೆಯ ಕಟ್ಟಡ ಹಾಗೂ ಮನೆಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

