Breaking News

ತಮೆಗೆ ಪಾಲಿನ ನೀರು ಸಿಕ್ಕಿಲ್ಲ ಎಂದು ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು: ಸಿಎಂ ವಿಜಯ್ ಸೂಚನೆ ಬೆನ್ನಲ್ಲೇ ಕರ್ನಾಟಕದ ವಿರುದ್ಧ ಅರ್ಜಿ

ದೆಹಲಿ: ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ಜಲವಿವಾದ ಮತ್ತೆ ಕಾವು ಪಡೆದುಕೊಂಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಸ್ಪಷ್ಟ ನಿರ್ದೇಶನಗಳ ಹೊರತಾಗಿಯೂ ಕರ್ನಾಟಕವು ತಮಿಳುನಾಡಿಗೆ ತನ್ನ ಪಾಲಿನ ನೀರನ್ನು ಬಿಡುಗಡೆ ಮಾಡಲು ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ನೇರ ಸೂಚನೆಯಂತೆ ಈ ತರ್ತು ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ. ನದಿ ಪ್ರಾಧಿಕಾರಗಳು ಪದೇ ಪದೇ ಸೂಚನೆ ಹಾಗೂ ಆದೇಶ ನೀಡಿದ್ದರೂ, ಕರ್ನಾಟಕ ಸರ್ಕಾರವು ಅಗತ್ಯ ಪ್ರಮಾಣದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಂಡಾಯದ ಕಿಡಿ: ಸಾಲು ಸಾಲು ರಾಜೀನಾಮೆಗೆ ಮುಂದಾದ ಶಾಸಕರು

ತಮಿಳುನಾಡಿನ ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಈ ಕುರಿತು ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದರು. CWMA ಮತ್ತು CWRC ನಿಗದಿಪಡಿಸಿದ ಪರಿಮಾಣದ ನೀರನ್ನು ಕರ್ನಾಟಕವು ತಕ್ಷಣವೇ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಬೇಕು ಎಂದು ತಮಿಳುನಾಡು ಸರ್ಕಾರ ಕೋರಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *