Breaking News

ಅಂಬಿಕಾ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ‘ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್’ ರಾಜ್ಯ ಪುರಸ್ಕಾರ ಗೌರವ

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಐವರು ವಿದ್ಯಾರ್ಥಿಗಳು ‘ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್’ ರಾಜ್ಯ ಪುರಸ್ಕಾರಕ್ಕೆ ಅರ್ಹತೆ ಪಡೆದು ಸಾಧನೆ ಮೆರೆದಿದ್ದಾರೆ.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯು ನಡೆಸಿದ 2024-25ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಪ್ರತಿಷ್ಠಿತ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಪುತ್ತೂರು: ಕರಾಟೆ ಪಂದ್ಯಾವಳಿಯಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಗಳು:

ಸ್ಕೌಟ್ ವಿಭಾಗ (ಪ್ರಥಮ ಪಿಯುಸಿ):

ಹಿಮಾಂಶು ಎಲ್. ಶೆಟ್ಟಿ

ಪ್ರಿಯಾಂಶು ರಾವ್

ನಿಖಿಲ್

ಪರೀಕ್ಷಿತ್ ಕೆ. ಪಿ.

ಗೈಡ್ಸ್ ವಿಭಾಗ:

ಮಂದಿರಾ ಕಜೆ

ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸ್ಕೌಟ್ ಶಿಕ್ಷಕರಾದ ಸತೀಶ್ ಇರ್ದೆ ಹಾಗೂ ಗೈಡ್ಸ್ ಶಿಕ್ಷಕಿ ಚಂದ್ರಕಲಾ ಅವರು ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಈ ಉನ್ನತ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *