Breaking News

ಆ.8ರಂದು ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ, ಪುತ್ತೂರು ಉವಿಭಾಗದ ತಹಶೀಲ್ದಾರ್ ಮನವಿ ಮೇರೆಗೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ಆ.8ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಳೆಯ ತೀವ್ರತೆ ಹೆಚ್ಚಿರುವ ಕಾರಣ ತಾಸು/ತಗ್ಗು ಪ್ರದೇಶಗಳು ಹಾಗೂ ನದಿ ತೀರಕ್ಕೆ ತೆರಳದಂತೆ ಮತ್ತು ಅಗತ್ಯವಿಲ್ಲದೆ ಹೊರಗಡೆ ಸಂಚರಿಸದಂತೆ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದ್ದು, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆ ನಡೆಸಬೇಕು, ಕಾಳಜಿ ಕೇಂದ್ರ ತೆರೆಯಲು ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ.

ಪ್ರಾಕೃತಿಕ ವಿಕೋಪ ಸಂಭವಿಸಿದರೆ 1077 ಅಥವಾ 0824-2442590 ಸಂಪರ್ಕಿಸುವಂತೆ ಕೋರಲಾಗಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *