Breaking News

ತಾರಾ ಹೋಟೆಲ್‌ಗಳಲ್ಲಿ ಆಹಾರದ ಶುಚಿತ್ವ ಪರಿಶೀಲನೆ: ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಂದ ಬಿರುಸಿನ ಕಾರ್ಯಾಚರಣೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿರುವ ಹೆಸರಾಂತ 3-ಸ್ಟಾರ್ ಹಾಗೂ 5-ಸ್ಟಾರ್ ತಾರಾ ಹೋಟೆಲ್‌ಗಳ ಮೇಲೆ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಬೃಹತ್ ದಾಳಿ ನಡೆಸಿ, ತೀವ್ರ ತನಿಖೆ ನಡೆಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 (FSS Act) ಹಾಗೂ ಆಹಾರ ನಿಯಮಾವಳಿಗಳು 2011ರ ನಿಬಂಧನೆಗಳು ಸರಿಯಾಗಿ ಪಾಲನೆಯಾಗುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಆಗಸ್ಟ್ 7 ರಂದು ಈ ವಿಶೇಷ ಪರಿಶೀಲನಾ ಕಾರ್ಯಾಚರಣೆ (Special Drive) ಹಮ್ಮಿಕೊಳ್ಳಲಾಗಿತ್ತು.

ಇಲಾಖೆಯ ಆಹಾರ ಸುರಕ್ಷತಾ ಅಧಿಕಾರಿಗಳನ್ನು ಒಳಗೊಂಡ ಬರೋಬ್ಬರಿ 30 ಪ್ರತ್ಯೇಕ ತಂಡಗಳನ್ನು ರಚಿಸಿ ನಗರದಾದ್ಯಂತ ಕಾರ್ಯಾಚರಣೆಗೆ ಇಳಿಸಲಾಗಿತ್ತು. ಬೆಂಗಳೂರಿನ ಪ್ರಮುಖ 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು, ಅಡುಗೆ ಕೋಣೆಗಳ ನೈರ್ಮಲ್ಯ, ಆಹಾರ ಸಾಮಗ್ರಿಗಳ ಗುಣಮಟ್ಟ, ಸಂಗ್ರಹಣಾ ವ್ಯವಸ್ಥೆ ಹಾಗೂ ಎಫ್‌ಎಸ್‌ಎಸ್‌ಎಐ (FSSAI) ಲೈಸೆನ್ಸ್ ದಾಖಲೆಗಳನ್ನು ಕೂಲಂಕುಷವಾಗಿ ತಪಾಸಣೆ ನಡೆಸಿದರು.

ಇದನ್ನೂ ಓದಿ: ಬೀಗ ಹಾಕಿದ್ದ ಮನೆಯ ಬಾತ್‌ರೂಮ್‌ನಲ್ಲಿ ಸಿಕ್ತು ಮಹಿಳೆಯ ಅಸ್ಥಿಪಂಜರ

ಗ್ರಾಹಕರಿಗೆ ಪೂರೈಸಲಾಗುವ ಆಹಾರದ ಶುಚಿತ್ವ ಮತ್ತು ಸುರಕ್ಷತೆಯ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *