Breaking News

ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಉದ್ಘಾಟನೆ: ‘ವ್ಯಸನ ಮುಕ್ತ ಭಾರತ’ ನಿರ್ಮಾಣಕ್ಕೆ ಕರೆ

ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ 2026-27ನೇ ಸಾಲಿನ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಆಗಸ್ಟ್ 07 ಶುಕ್ರವಾರದಂದು ಕಾಲೇಜಿನ ಆಜಾದ್ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮವನ್ನು ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಪ್ರಕಾಶ್ ಅವರು ಉದ್ಘಾಟಿಸಿ, “ವ್ಯಸನ ಮುಕ್ತ ಹಾಗೂ ನಶಾ ಮುಕ್ತ ಭಾರತ” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.

ಉದ್ಘಾಟನಾ ಭಾಷಣ ಮಾಡಿದ ಡಾ. ಜಯಪ್ರಕಾಶ್ ಅವರು, ಯುವಜನತೆ ಮಾದಕ ದ್ರವ್ಯ ಹಾಗೂ ದುರ್ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಎನ್‌ಎಸ್‌ಎಸ್ ಸ್ವಯಂಸೇವಕರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಭವಿಷ್ ಘಟಕ ಉದ್ಘಾಟನೆ: ಶಿಕ್ಷಕ ವೃತ್ತಿ ಸರ್ವಶ್ರೇಷ್ಠ ಎಂದ ಡಾ. ಪ್ರಭಾಕರ ಭಟ್

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ವಿಭಾಗದ ಉಪ ಪ್ರಾಂಶುಪಾಲರಾದ ಶ್ರೀ ಯತಿರಾಜ್ ಪಿ. ಅವರು ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮತ್ತು ಜವಾಬ್ದಾರಿಯ ಭಾವನೆಯನ್ನು ಮೂಡಿಸುತ್ತದೆ. ಸ್ವಯಂಸೇವಕರು ತಮ್ಮ ಕರ್ತವ್ಯಗಳನ್ನು ಅರಿತು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಶಿಸ್ತು ಹಾಗೂ ಜವಾಬ್ದಾರಿಗಳನ್ನು ನೆನಪಿಸಿದರು.

ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಿನುತಲಕ್ಷ್ಮಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಗೀತೆಯನ್ನು ದ್ವಿತೀಯ ಬಿ.ಕಾಮ್ ವಿದ್ಯಾರ್ಥಿ ನಿಖಿಲ್ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ದ್ವಿತೀಯ ಬಿ.ಕಾಮ್ ಸ್ವಯಂಸೇವಕಿ ಪ್ರಣಮ್ಯ ಸ್ವಾಗತ ಕೋರಿದರು. ವಂದನಾರ್ಪಣೆ ದ್ವಿತೀಯ ಬಿ.ಸಿ.ಎ ಸ್ವಯಂಸೇವಕಿ ಜಯಶ್ರೀ ಮಾಡಿದರು. ಕಾರ್ಯಕ್ರಮ ನಿರೂಪಣೆ ಬಿ.ಸಿ.ಎ ವಿದ್ಯಾರ್ಥಿನಿ ಕವನ ಮಾಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *