Breaking News

ಬೆಂಗಳೂರಿನಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಅಂಡರ್‌ಪಾಸ್ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ದಾರುಣ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಫ್‌ಟಿಐ (FTI) ವೃತ್ತದ ಬಳಿ ನಿರ್ಮಾಣ ಹಂತದಲ್ಲಿದ್ದ ಅಂಡರ್‌ಪಾಸ್ ಕಾಮಗಾರಿ ವೇಳೆ ಭಾರಿ ಅನಾಹುತ ಸಂಭವಿಸಿದೆ. ಕಾಮಗಾರಿ ನಡೆಯುತ್ತಿದ್ದ ಗುಂಡಿಯ ಮಣ್ಣು ಏಕಾಏಕಿ ಕುಸಿದುಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೈಗೆತ್ತಿಕೊಂಡಿದ್ದ ಅಂಡರ್‌ಪಾಸ್ ಯೋಜನೆಯ ಆರ್‌ಸಿಸಿ (RCC) ಕಾಮಗಾರಿ ನಡೆಯುತ್ತಿತ್ತು. ತೋಡಲಾಗಿದ್ದ ಗುಂಡಿಯಲ್ಲಿದ್ದ ನೀರನ್ನು ಹೊರಹಾಕುವ ಕಾರ್ಯ ಸಾಗುತ್ತಿದ್ದಾಗ, ಹಠಾತ್ತಾಗಿ ಪಕ್ಕದಲ್ಲಿದ್ದ ಮಣ್ಣಿನ ದಿಬ್ಬ ಕುಸಿದುಬಿದ್ದಿದೆ.


ಮಣ್ಣು ಕುಸಿದ ಸಮಯದಲ್ಲಿ ಐವರು ಕಾರ್ಮಿಕರು ಗುಂಡಿಯೊಳಗೆ ಕೆಲಸ ಮಾಡುತ್ತಿದ್ದರು. ಕುಸಿತವನ್ನು ಗಮನಿಸಿದ ಮೂವರು ಕಾರ್ಮಿಕರು ತಕ್ಷಣ ಹೊರಬರಲು ಯಶಸ್ವಿಯಾದರೆ, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡರು. ಒಡಿಶಾ ಮೂಲದ ಈ ಕಾರ್ಮಿಕನನ್ನು ರಕ್ಷಿಸಿ ಕಣ್ವ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ:  ತಾರಾ ಹೋಟೆಲ್‌ಗಳಲ್ಲಿ ಆಹಾರದ ಶುಚಿತ್ವ ಪರಿಶೀಲನೆ: ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಂದ ಬಿರುಸಿನ ಕಾರ್ಯಾಚರಣೆ

ಮಣ್ಣಿನಡಿಯಲ್ಲಿ ಸಿಲುಕಿ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮೂಲದ ಸದಾನಂದ, ಸುನಿಲ್ ಮತ್ತು ಇರ್ತಿಯಾಜ್ ಎಂಬಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಘಟನೆ ಕುರಿತು ತನಿಖೆ ಮುಂದುವರಿದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *