Breaking News

ತುರ್ತು ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ತಾನೇ ಡ್ರೈವ್ ಮಾಡಿ ಆಸ್ಪತ್ರೆಗೆ ತಲುಪಿಸಿದ ಪೊಲೀಸ್ ಅಧಿಕಾರಿ

ಪೊಲೀಸರೆಂದರೆ ಸಾಮಾನ್ಯವಾಗಿ ದಂಡ ವಿಧಿಸುವವರು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವವರು ಎಂದೇ ಬಿಂಬಿತವಾಗುತ್ತದೆ. ಆದರೆ, ಮಾನವೀಯತೆ ಮತ್ತು ಸಮಯಪ್ರಜ್ಞೆ ಎಲ್ಲಕ್ಕಿಂತ ಮಿಗಿಲಾದದ್ದು ಎಂಬುದನ್ನು ಇಲ್ಲೊಬ್ಬರು ಪೊಲೀಸ್ ಅಧಿಕಾರಿ ಸಾಬೀತುಪಡಿಸಿದ್ದಾರೆ. ಇದೀಗ ಎಕ್ಸ್​​​ನಲ್ಲಿ ವೈರಲ್​​ ಆಗಿರುವ ವಿಡಿಯೋದಲ್ಲಿ ರಸ್ತೆ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ತಡೆದು ದಂಡ ವಿಧಿಸುವ ಬದಲು, ಆತನ ಗರ್ಭಿಣಿ ಪತ್ನಿಯ ಜೀವ ರಕ್ಷಿಸಲು ತಾನೇ ಚಾಲಕನಾಗಿ ಆಸ್ಪತ್ರೆಗೆ ತಲುಪಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ವಿಡಿಯೋ ಉತ್ತರ ಭಾರತದ್ದು ಎಂದು ಹೇಳಲಾಗಿದೆ.

ಸಾಮಾನ್ಯ ವಾಹನ ತಪಾಸಣೆ ಸಮಯದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕಾರೊಂದನ್ನು ತಡೆದು ತಪಾಸಣೆ ನಡೆಸಿದಾಗ, ಚಾಲನೆ ಮಾಡುತ್ತಿದ್ದ ವ್ಯಕ್ತಿ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಆದರೆ, ಕಾರಿನ ಹಿಂಬದಿಯ ಸೀಟಿನಲ್ಲಿ ಆತನ ಪತ್ನಿ ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದು, ತಕ್ಷಣ ಆಸ್ಪತ್ರೆಗೆ ತಲುಪಬೇಕಾದ ತುರ್ತು ಪರಿಸ್ಥಿತಿಯಲ್ಲಿದ್ದರು.


ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಪೊಲೀಸರು ನಿಯಮದಂತೆ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಚಲನ್ ನೀಡಿ ವಾಹನವನ್ನು ಜಪ್ತಿ ಮಾಡುವುದು ಸಹಜ. ಆದರೆ, ಪರಿಸ್ಥಿತಿಯ ಗಂಭೀರತೆ ಮತ್ತು ಸಮಯದ ಮಹತ್ವವನ್ನು ಅರಿತ ಅಧಿಕಾರಿ, ಕಾನೂನಿಗಿಂತಲೂ ಜೀವ ರಕ್ಷಣೆ ಮುಖ್ಯ ಎಂದು ನಿರ್ಧರಿಸಿದರು.

ಇದನ್ನೂ ಓದಿ: ಡ್ಯಾನ್ಸ್ ಚಿತ್ರೀಕರಣದಲ್ಲಿ ರಶ್ಮಿಕಾ ಮಂದಣ್ಣಗೆ ಅಪರೂಪದ ಹಿಪ್ ಇಂಜುರಿ! ರಣಬಾಳಿ ಅಥವಾ ಮೈಸಾ ಶೂಟಿಂಗ್‌ ವಿಳಂಬ

ಮದ್ಯಪಾನ ಮಾಡಿದ್ದ ಚಾಲಕನನ್ನು ಬದಿಗೆ ಸರಿಸಿ, ತಾವೇ ಕಾರಿನ ಚಾಲಕನ ಸೀಟಿನಲ್ಲಿ ಕುಳಿತು ಕಾರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಓಡಿಸಿಕೊಂಡು ಹೋದರು. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿಸಿದ ಕಾರಣ, ಗರ್ಭಿಣಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಲಭಿಸಿತು. ಆಸ್ಪತ್ರೆಯಲ್ಲಿ ಮಹಿಳೆ ಸುಖಪ್ರಸವವಾಗಿ, ತಾಯಿ ಮತ್ತು ನವಜಾತ ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *