ಮಂಗಳೂರು : ಕಾಯಿ ತುರಿಯುವ ಮೆಷಿನ್’ಗೆ ಕೈ ಸಿಲುಕಿ ಚೀರಾಡುತ್ತಿದ್ದ ಅಕ್ಷರದಾಸೋಹ ಸಿಬ್ಬಂದಿಯನ್ನು 5ನೇ ತರಗತಿ ವಿದ್ಯಾರ್ಥಿ ರಕ್ಷಿಸಿದ ಘಟಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಅಲ್ಲದೆ ವಿದ್ಯಾರ್ಥಿಯ ಸಮಯಪ್ರಜ್ಞೆಯನ್ನು ಮುಖಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶ್ಲಾಘಿಸಿದ್ದಾರೆ.
ಶಾಲೆಯ ಅಕ್ಷರ ದಾಸೋಹ ವಿಭಾಗದ ಸಿಬ್ಬಂದಿ ವಿದ್ಯುತ್ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಕೆಲಸ ಮಾಡುತ್ತಿದ್ದಾಗ, ಆಕಸ್ಮಿಕವಾಗಿ ಅವರ ಕೈಬೆರಳು ಯಂತ್ರದೊಳಗೆ ಸಿಲುಕಿಕೊಂಡಿದೆ.
ನೋವಿನಿಂದ ಸಿಬ್ಬಂದಿ ಕಿರುಚಾಡುತ್ತಿದ್ದಾಗ, ಪರಿಸ್ಥಿತಿಯ ಗಂಭೀರತೆಯನ್ನು ಕ್ಷಣಮಾತ್ರದಲ್ಲಿ ಅರಿತ 5ನೇ ತರಗತಿಯ ವಿದ್ಯಾರ್ಥಿ ಮನ್ವಿತ್, ತಕ್ಷಣವೇ ಓಡಿಹೋಗಿ ಮೆಷಿನ್ ಸ್ವಿಚ್ ಆಫ್ ಮಾಡಿದ್ದಾನೆ. ಬಾಲಕ ಮನ್ವಿತ್ನ ಈ ಜಾಗರೂಕತೆ ಹಾಗೂ ಸಮಯಪ್ರಜ್ಞೆಯಿಂದಾಗಿ ಅಡುಗೆ ಸಿಬ್ಬಂದಿಗೆ ಸಂಭವಿಸಬಹುದಾಗಿದ್ದ ದೊಡ್ಡ ಅಪಾಯ ತಪ್ಪಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಇದನ್ನೂ ಓದಿ: ಜಿಲ್ಲಾಮಟ್ಟದ ಗಣಿತ-ವಿಜ್ಞಾನ ಮೇಳ: ಶ್ರೀರಾಮ ಶಾಲೆಯ ಸುಧನ್ವ ಕಾಮತ್ಗೆ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ
ವಿದ್ಯಾರ್ಥಿ ಮನ್ವಿತ್ ತೋರಿಸಿದ ಧೈರ್ಯ ಹಾಗೂ ಸಮಯಪ್ರಜ್ಞೆಯನ್ನು ಕೊಂಡಾಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಧಿಕೃತ ಎಕ್ಸ್ (X) ಖಾತೆಯಲ್ಲಿ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ. “ಬಾಲಕನ ಒಂದು ಕ್ಷಣದ ಜಾಗರೂಕತೆ, ಸರಿಯಾದ ನಿರ್ಧಾರವೊಂದು ಅಡುಗೆ ಸಿಬ್ಬಂದಿಯ ಕೈಬೆರಳನ್ನು ಉಳಿಸಿದೆ. ಮನ್ವಿತ್ನ ಈ ಮಾನವೀಯ ಕಾಳಜಿ, ಧೈರ್ಯ ಮತ್ತು ಸಮಯಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಬಾಲಕನ ಮುಂದಿನ ಭವಿಷ್ಯ ಉಜ್ವಲವಾಗಲಿ, ಸಮಾಜದ ಒಳಿತಿಗಾಗಿ ಸದಾ ಸ್ಪಂದಿಸುವ ಉತ್ತಮ ಪ್ರಜೆಯಾಗಿ ಬೆಳೆದು ನಾಡಿಗೆ ಕೀರ್ತಿ ತರಲಿ ಎಂದು ಹಾರೈಸುತ್ತೇನೆ.” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

