Breaking News

ವಿದ್ಯಾಭಾರತಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

ಬಂಟ್ವಾಳ: ಪ್ರಸ್ತುತ ಸಾಲಿನ ವಿದ್ಯಾಭಾರತಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಲ್ಲಡ್ಲದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕರ ತಂಡವು ದ್ವಿತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ.

ದಿನಾಂಕ ಆಗಸ್ಟ್ 13, 2026 ರಂದು ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಈ ರೋಚಕ ಜಿಲ್ಲಾ ಮಟ್ಟದ ಸರಣಿಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್ಸ್-ಅಪ್ (ದ್ವಿತೀಯ ಸ್ಥಾನ) ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವೈಭವದ ‘ಆಟಿದ ಕೂಟ’: ಹಿರಿಯರ ನಂಬಿಕೆ, ಪರಂಪರೆಯರಿತ ವಿದ್ಯಾರ್ಥಿಗಳು
ತಂಡದ ಈ ಪ್ರಶಂಸನೀಯ ಸಾಧನೆಗೆ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಾಧ್ಯಾಯ ವೃಂದ ಹಾಗೂ ಕ್ರೀಡಾಭಿಮಾನಿಗಳು ತೀವ್ರ ಹರ್ಷ ವ್ಯಕ್ತಪಡಿಸಿದ್ದು, ವಿಜೇತ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *