ಬಂಟ್ವಾಳ: ಸೈನ್ಸ್ ಇಂಟಿಗ್ರೇಟೆಡ್ ವಿಭಾಗದ ವಿದ್ಯಾರ್ಥಿಗಳ ಪೋಷಕರಿಗಾಗಿ ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಆಗಸ್ಟ್ 13 ರಂದು ‘ಪಾಲಕ ಪ್ರಬೋಧನ್’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾಲೇಜಿನ ಸೈನ್ಸ್ ಇಂಟಿಗ್ರೇಟೆಡ್ ಬ್ಯಾಚ್ನ ಪೋಷಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ (MBA) ವಿಭಾಗದ ಉಪನ್ಯಾಸಕರಾದ ಪದ್ಮನಾಭ ಬಿ. ಅವರು ಪಾಲಕರನ್ನು ಉದ್ದೇಶಿಸಿ ಮಾತನಾಡಿದರು. ಶೈಕ್ಷಣಿಕ ಜೀವನದ ಅತ್ಯಂತ ನಿರ್ಣಾಯಕ ಘಟ್ಟವಾದ ಪಿಯುಸಿ (PUC) ಹಂತದಲ್ಲಿ ಮಕ್ಕಳ ಮಾನಸಿಕ ಸ್ಥಿತಿಯನ್ನು ಅರ್ಥೈಸಿಕೊಳ್ಳುವುದು, ಅವರ ಮೇಲಿನ ಒತ್ತಡವನ್ನು ನಿರ್ವಹಿಸುವುದು ಹಾಗೂ ಈ ವಯಸ್ಸಿನಲ್ಲಿ ಪೋಷಕರು ವಹಿಸಬೇಕಾದ ಪ್ರಮುಖ ಜವಾಬ್ದಾರಿಗಳ ಕುರಿತು ಅವರು ಸವಿಸ್ತಾರವಾಗಿ ವಿವರಿಸಿದರು.
ಇದನ್ನೂ ಓದಿ: ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ವೈಭವದ ‘ಆಟಿದ ಕೂಟ’: ಹಿರಿಯರ ನಂಬಿಕೆ, ಪರಂಪರೆಯರಿತ ವಿದ್ಯಾರ್ಥಿಗಳು
ಪ್ರಾಂಶುಪಾಲ ವಸಂತ ಬಲ್ಲಾಳ್, ವಿಜ್ಞಾನ ವಿಭಾಗದ ಮುಖ್ಯಸ್ಥೆ ಶೈಲಿನಿ ಹಾಗೂ ಸೈನ್ಸ್ ಇಂಟಿಗ್ರೇಟೆಡ್ ಬ್ಯಾಚ್ನ ಸಂಯೋಜಕಿ ಚೈತನ್ಯ ಉಪಸ್ಥಿತರಿದ್ದರು.
ಉಪನ್ಯಾಸಕಿ ಸುಚೇತ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸೈನ್ಸ್ ವಿಭಾಗದ ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

