Breaking News

ವಿದ್ಯಾರ್ಥಿಗಳಿಗೆ ಹಾಗೂ ಗೃಹಲಕ್ಷ್ಮೀಯರಿಗೆ ಸ್ವಾತಂತ್ರ್ಯ ದೊಡ್ಡ ಗಿಫ್ಟ್​​ ನೀಡಿ ಸಿಎಂ ಡಿಕೆಶಿ

ಬೆಂಗಳೂರು: ನಗರದ ಐತಿಹಾಸಿಕ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ತಮ್ಮ ಸುದೀರ್ಘ ಭಾಷಣದಲ್ಲಿ ಅವರು ಸರ್ಕಾರದ ಸಾಧನೆಗಳು, ಆರ್ಥಿಕ ನೀಲನಕ್ಷೆ ಹಾಗೂ ಮುಂಬರುವ ಮೂಲಸೌಕರ್ಯ ಯೋಜನೆಗಳನ್ನು ವಿವರವಾಗಿ ಮಂಡಿಸಿದರು.

ಕಳೆದ 2 ತಿಂಗಳಿಂದ ಪಂಚಾಯಿತಿ ಮತ್ತು ಹೋಬಳಿ ಮಟ್ಟದಲ್ಲಿ ಶಾಸಕರು ಸಾರ್ವಜನಿಕ ಸಭೆ ನಡೆಸಿ ಕುಂದುಕೊರತೆ ಆಲಿಸುವ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.ರಾಜ್ಯದ ತಲಾದಾಯ ಪ್ರಸ್ತುತ ₹4.33 ಲಕ್ಷ ತಲುಪಿದ್ದು, ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಡಳಿತವನ್ನು ಸ್ಮರಿಸಿದ ಸಿಎಂ, ರಾಜ್ಯವನ್ನು 3 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಕೊಂಡೊಯ್ಯುವ ನೀಲನಕ್ಷೆ ಸಿದ್ಧವಾಗಿದೆ ಎಂದರು.

ಕಳೆದ 3 ವರ್ಷಗಳಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ ₹15,000 ಕೋಟಿ ವೆಚ್ಚ ಮಾಡಲಾಗಿದ್ದು, ಮಹಿಳೆಯರ ಮೇಲಿನ ದೌರ್ಜನ್ಯಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ತಿಳಿಸಿದರು.ಶಾಲಾ ಶಿಕ್ಷಣದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತರಬೇತಿಯನ್ನು ಜಾರಿಗೆ ತರಲಾಗುತ್ತಿದ್ದು, ಯುವ ಸಮೂಹದಲ್ಲಿ ದೇಶಭಕ್ತಿ ಮತ್ತು ನಾಯಕತ್ವ ಬೆಳೆಸಲು 10,000 ಭಾರತ್ ಜೋಡೋ ತಂಡಗಳನ್ನು ರೂಪಿಸಲಾಗುತ್ತಿದೆ.

ಇದನ್ನೂ ಓದಿ: ಕಾಡಿನ ನಕ್ಸಲರು ಖಾಲಿಯಾಗಿದ್ದಾರೆ, ಈಗ ‘ದಿಮಾಗಿ ನಕ್ಸಲರ’ ವಿರುದ್ಧ ಹೋರಾಟ”: ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ

ಅಲ್ಪಸಂಖ್ಯಾತ ವಿದ್ಯಾರ್ಥಿವೇತನಕ್ಕಾಗಿ ₹494 ಕೋಟಿ ಡಿಬಿಟಿ ಮೂಲಕ ಜಾರಿಯಲ್ಲಿದೆ. NEET ಹಾಗೂ KPSC ಪರೀಕ್ಷಾ ಅಕ್ರಮ ತಡೆಗೆ ಪರಿಣಿತ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, 2 ತಿಂಗಳಲ್ಲಿ ವರದಿ ಬಂದ ನಂತರ ಮಾದರಿ ಪರೀಕ್ಷಾ ಕ್ರಮ ಜಾರಿಯಾಗಲಿದೆ.112 ಜಲಸಂಪನ್ಮೂಲ ಯೋಜನೆಗಳಿಗೆ ₹16,000 ಕೋಟಿ ಅನುಮೋದನೆ ನೀಡಲಾಗಿದ್ದು, ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಮೂಲಕ ನವೆಂಬರ್ ವೇಳೆಗೆ ತುಮಕೂರು ಜಿಲ್ಲೆಗೆ ನೀರು ತಲುಪಿಸಲಾಗುವುದು. ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸಲು ಹಾಗೂ ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ‘ಕಲ್ಯಾಣಪಥ’ ಯೋಜನೆಯಡಿ 1,150 ಕಿ.ಮೀ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಹಿಂದುಳಿದ ತಾಲೂಕುಗಳಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಮೂಲಕ ಸ್ಥಳೀಯ ಉದ್ಯೋಗಾವಕಾಶ ಹೆಚ್ಚಿಸಲಾಗುತ್ತಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *