ಸುಳ್ಯ : ದೇಶದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ರಜತಮಹೋತ್ಸವದ ಶುಭ ಸಂದರ್ಭದಲ್ಲಿ, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ವತಿಯಿಂದ ಸುಳ್ಯದ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ನಾರ್ಣಕಜೆಯ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು.
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷರಾದ ಉಮೇಶ್ ಪ್ರಭು ಕೆ. ಅವರು ಶಾಲಾ ಮಕ್ಕಳಿಗೆ ಬ್ಯಾಗ್ಗಳನ್ನು ವಿತರಿಸಿ ಶುಭ ಹಾರೈಸಿದರು.
ಇದನ್ನೂ ಓದಿ:ರಜತ ಮಹೋತ್ಸವ: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ಬೆಂಗಳೂರಿನಲ್ಲಿ ಬೆಳ್ಳಿ ಬೆಳಕು ಆಚರಣೆ
ಕಾರ್ಯಕ್ರಮದಲ್ಲಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಯಜ್ಞೇಶ್ವರ ನಾರ್ಣಕಜೆ ಹಾಗೂ ಸರಸ್ವತಿ ಸಹಕಾರಿಯ ಸಿಬ್ಬಂದಿ ಕೃಷ್ಣಯ್ಯ ಉಪಸ್ಥಿತರಿದ್ದು ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

