Breaking News

ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಚಿ: ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡುವಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಶಂಕರ್ ರಾವ್ ಅವರು, “ಭವ್ಯ ಭಾರತದ ಭವಿಷ್ಯದ ಕನಸುಗಳನ್ನು ನಾವು ಶಾಲಾ ಅಂಗಳದಲ್ಲೇ ಕಾಣುತ್ತಿದ್ದೇವೆ. ಪಠ್ಯ ಶಿಕ್ಷಣದ ಜೊತೆಗೆ ಪ್ರತಿಯೊಂದು ಮಗುವಿನಲ್ಲೂ ದೇಶಪ್ರೇಮ, ಪರಿಸರ ಕಾಳಜಿ ಹಾಗೂ ಹಿರಿಯರಿಗೆ ಗೌರವ ನೀಡುವಂತಹ ಸಂಸ್ಕಾರ ಪೂರಿತ ಮೌಲ್ಯಗಳು ಮೂಡಿಬರಬೇಕು. ಆಗ ಮಾತ್ರ ನಮ್ಮ ಹಿರಿಯರು ತ್ಯಾಗ-ಬಲಿದಾನಗಳಿಂದ ಗಳಿಸಿಕೊಟ್ಟ ಸ್ವಾತಂತ್ರ್ಯಕ್ಕೆ ನೈಜ ಅರ್ಥ ಲಭಿಸುತ್ತದೆ,” ಎಂದು ಆಶಯ ವ್ಯಕ್ತಪಡಿಸಿದರು.

ಶಾಲಾ ನಾಯಕಿ  ನೀಸಾ ಧ್ವಜವಂದನೆ ಸಲ್ಲಿಸಿ ಗಣ್ಯರಿಗೆ ಗೌರವ ಸಮರ್ಪಿಸಿದರು.ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಮಹತ್ವದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು ಹಾಗೂ ವೈವಿಧ್ಯಮಯ ನೃತ್ಯ ರೂಪಕಗಳ ಮೂಲಕ ಪ್ರೇಕ್ಷಕರ ಮನಸೆಳೆದರು.

ಈ ಆಚರಣೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಯಶೋಧ ಬಿ. ಶೆಟ್ಟಿ, ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಅಂಬಿಕಾ ಸಂಸ್ಥೆಗಳಲ್ಲಿ ಮಾಜಿ ಸೈನಿಕರ ಸಮ್ಮಿಲನ-ಭೋಜನಕೂಟ: ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸುಶೀಲ ಎಲ್ಲರನ್ನೂ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವಿನೋದ ಕಾರ್ಯಕ್ರಮ ನಿರೂಪಿಸಿದರು. ಕಲಾ ಶಿಕ್ಷಕ ಜಗನ್ನಾಥ ಪಿ. ವಂದಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *