Breaking News

ಅತಿ ವೇಗಕ್ಕೆ ಬಲಿಯಾದ ಯುವಕ: ನಿಯಂತ್ರಣ ತಪ್ಪಿ ಪಲ್ಟಿಯಾದ ಬೈಕ್, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಆಂಧ್ರಪ್ರದೇಶ : ಆಂಧ್ರಪ್ರದೇಶದ ಉಯ್ಯೂರು-ಪಮರ್ರು (Uyyuru–Pamarru) ಮಾರ್ಗದಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 21 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಯುವಕನು ತನ್ನ ಮೋಟಾರ್ ಸೈಕಲ್‌ನಲ್ಲಿ ಅತಿ ವೇಗವಾಗಿ ಪ್ರಯಾಣಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಚಾಲಕನ ಹತೋಟಿ ತಪ್ಪಿ ರಸ್ತೆಗೆ ಬಿದ್ದಿದ್ದಾನೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಖಾಂಡ್ವಾದಲ್ಲಿ ವಿನೂತನ ಪ್ರತಿಭಟನೆ: ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ

Video:

ಬೈಕ್ ಸವಾರ ನಿಯಂತ್ರಣ ತಪ್ಪಿ ರಸ್ತೆಗೆ ಬೀಳುವ ಭೀಕರ ದೃಶ್ಯಗಳು ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *