Sakleshpur: ಮಹಿಳೆಯನ್ನು ಕೊಂದ ಪುಂಡಾನೆ ಸೆರೆಗೆ ಮುಹೂರ್ತ ಫಿಕ್ಸ್

ಸಕಲೇಶಪುರ: ಹಾಸನ ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಮಿತಿಮೀರಿದೆ. ಬೆಳೆಗಳನ್ನು ಹಾಳು ಮಾಡುವುದಲ್ಲದೇ ಮಾನವನ ಮೇಲೂ ಎರಗಿ ಜೀವ ಹಾನಿ ಕೂಡ ಮಾಡುತ್ತಿದೆ.

ಇತ್ತೀಚೆಗೆ ಸಕಲೇಶಪುರ ಸಮೀಪ ಮಹಿಳೆಯೊಬ್ಬರನ್ನು ಕಾಡಾನೆ ತುಳಿದು ಕೊಂದು ಹಾಕಿತ್ತು. ಈಗ ಆ ಕಾಡಾನೆ ಸೆರೆಗೆ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ.

ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು ಸುಗ್ರೀವ ಆನೆಗಳು ಈ ತಂಡದಲ್ಲಿವೆ. ಇಂದಿನಿಂದಲೇ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಲಿದೆ. ಸ್ಥಳೀಯರ ಒತ್ತಾಯಕ್ಕೆ ಮಣಿದು ಕೊಡಗು ಭಾಗದಿಂದ ಬಂದ ಈ ನರಹಂತಕ ಆನೆಯನ್ನು ಸೆರೆಹಿಡಿಯಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದರು.

ಇತ್ತೀಚೆಗೆ ಆಲೂರು ಸಮೀಪ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಶೋಭ ಅವರ ಮೇಲೆ ಕಾಡಾನೆ ದಾಳಿ ಮಾಡಿ, ಕೊಂದು ಹಾಕಿತ್ತು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹ ಮೇಲೆತ್ತಲು ಬಿಡದೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಬಾಂಗ್ಲಾದಲ್ಲಿ ಮತ್ತೆ ಹಿಂದೂಗಳ ಮೇಲೆ ದಾಳಿ: ಹಿಂದೂ ಶಿಕ್ಷಕನ ಮನೆ ಬೆಂಕಿಗಾಹುತಿ

ಪ್ರತಿಭಟನೆಗೆ ಸಾಥ್ ನೀಡಿದ್ದ ಶಾಸಕ ಸಿಮೆಂಟ್ ಮಂಜು ಸ್ಥಳದಿಂದಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಕರೆ ಮಾಡಿದ್ದರು. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುಂತೆ ಒತ್ತಾಯಿಸಿದ್ದರು. ಸ್ಥಳಕ್ಕೆ ಆಗಮಿಸಿ ಹೋರಾಟಗಾರರ ಮನವಿ ಆಲಿಸಿ ಸಚಿವರ ಗಮನಕ್ಕೆ ತರುವುದಾಗಿ ಡಿಸಿ ಕೆ.ಎಸ್.ಲತಾಕುಮಾರಿ ಭರವಸೆ ನೀಡಿದ್ದರು.

ಇಂದಿನಿಂದ ಪುಂಡಾನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಪ್ರಾರಂಭಗೊಳ್ಳಲಿದೆ. ಸಾರ್ವಜನಿಕರು ಹೊರಗೆ ಓಡಾಡುವಾಗ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು