Breaking News

ಉಡುಪಿಯಲ್ಲಿ ಪತ್ರಕರ್ತನ ಮೇಲೆ ವೈದ್ಯನಿಂದ ದೌರ್ಜನ್ಯ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ಮಾಜಿ ವೈದ್ಯಾಧಿಕಾರಿ (ಶಲ್ಯಚಿತ್ರಜ್ಞ) ಡಾ. ಮಹೇಂದ್ರ ಶೆಟ್ಟಿ ಅವರು ಆಸ್ಪತ್ರೆಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವರದಿಯ ದ್ವೇಷವಿಟ್ಟುಕೊಂಡು ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹೋಟೆಲ್‌ನಲ್ಲಿ ಏಕಾಏಕಿ ಹಲ್ಲೆ ನಡೆಸಿ, ನಿಂದಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಕುರಿತು ಶ್ರೀಕಾಂತ್ ಹೆಮ್ಮಾಡಿ ಅವರು ತನಿಖಾ ವರದಿ ಪ್ರಕಟಿಸಿದ್ದರು. ಇದರಿಂದ ಕೆರಳಿದ್ದ ವೈದ್ಯ ಡಾ. ಮಹೇಂದ್ರ ಶೆಟ್ಟಿ, ಹೋಟೆಲ್‌ನಲ್ಲಿ ಪತ್ನಿಯೊಂದಿಗೆ ಇದ್ದ ಪತ್ರಕರ್ತನ ಮೇಲೆ ದಾಳಿ ನಡೆಸಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ. ಕುರ್ಯ ಅವರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ವೈದ್ಯನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು ರೈಲ್ವೇ ವಿಲೀನಕ್ಕೆ ಕೇರಳ ತೀವ್ರ ಆಕ್ರೋಶ: ಪ್ರಧಾನಿ ಮೋದಿ, ರೈಲ್ವೇ ಸಚಿವರಿಗೆ ದೂರು ನೀಡಲು ತೀರ್ಮಾನ

ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಆರೋಗ್ಯ ಇಲಾಖೆಯು ಡಾ. ಮಹೇಂದ್ರ ಶೆಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು (Suspension) ಮಾಡಿ ಆದೇಶ ಹೊರಡಿಸಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *