Breaking News

ನಾಯಿಗೆ ಹೆದರಿ 50 ಅಡಿ ಆಳದ ಪಾಳುಬಿದ್ದ ಬಾವಿಗೆ ಬಿದ್ದ ಬಾಲಕಿ: ಆಕ್ಸಿಜನ್ ಮಾಸ್ಕ್ ಧರಿಸಿ ರಕ್ಷಿಸಿದ ರಕ್ಷಣಾ ಪಡೆ

ಫರೂಖಾಬಾದ್ : ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಯೊಬ್ಬಳು ಬೀದಿ ನಾಯಿಯ ದಾಳಿಗೆ ಹೆದರಿ ಓಡುವಾಗ 50 ಅಡಿ ಆಳದ ಪಾಳುಬಿದ್ದ ಬಾವಿಗೆ ಬಿದ್ದು, ಬಳಿಕ ರಕ್ಷಣಾ ಪಡೆಗಳ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ರೋಚಕ ಘಟನೆ ಉತ್ತರ ಪ್ರದೇಶದ ಫರೂಖಾಬಾದ್‌ನಲ್ಲಿ ನಡೆದಿದೆ.

ಬಾಲಕಿ ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದಾಗ ಬೀದಿ ನಾಯಿಯೊಂದು ಆಕೆಯನ್ನು ಅಟ್ಟಿಸಿಕೊಂಡು ಬಂದಿದೆ.ನಾಯಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಭೀತಿಯಿಂದ ಓಡಿದ ಬಾಲಕಿ, ರಸ್ತೆ ಬದಿಯಲ್ಲಿದ್ದ 50 ಅಡಿ ಆಳದ ಪಾಳುಬಿದ್ದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾಳೆ.

ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ರಕ್ಷಣಾ ಪಡೆಗಳು (Rescue Teams) ಬೃಹತ್ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದವು.ಬಾವಿಯ ಆಳದಲ್ಲಿದ್ದ ಬಾಲಕಿಗೆ ಉಸಿರಾಟದ ತೊಂದರೆಯಾಗದಂತೆ ತಕ್ಷಣ ಆಕ್ಸಿಜನ್ ಮಾಸ್ಕ್ (Oxygen Mask) ಕಳುಹಿಸಿ, ಸುರಕ್ಷಿತವಾಗಿ ಉಸಿರಾಡುವಂತೆ ವ್ಯವಸ್ಥೆ ಮಾಡಲಾಯಿತು.

ಇದನ್ನೂ ಓದಿ: ಪುತ್ತೂರು ಹಲ್ಲೆ ಪ್ರಕರಣ: ತಾವು ಏನೂ ಮಾಡಿದರೂ ನಮ್ಮ ಬೆಂಬಲಕ್ಕೆ ಸರ್ಕಾರ ಇದೆ ಎಂಬ ಧೈರ್ಯ ಅವರಿಗೆ: ಕಟೀಲ್ ಆಕ್ರೋಶ

ಸತತ ಶ್ರಮದ ಬಳಿಕ ರಕ್ಷಣಾ ಸಿಬ್ಬಂದಿ ಬಾವಿಯೊಳಗೆ ಇಳಿದು ಬಾಲಕಿಯನ್ನು ಸುರಕ್ಷಿತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದರು. ಪ್ರಸ್ತುತ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Leave a Reply

Your email address will not be published. Required fields are marked *