ಮಂಗಳೂರು: ಮಂಗಳೂರಿನ ವಿವಿಧ ನಿರ್ಮಾಣ ಹಂತದ ಕಟ್ಟಡಗಳಲ್ಲಿ ನಕಲಿ ದಾಖಲೆಗಳನ್ನು ಬಳಸಿ ಕಾನೂನುಬಾಹಿರವಾಗಿ ಕೆಲಸ ಮಾಡುತ್ತಿದ್ದ 21 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಸ್ವದೇಶಕ್ಕೆ ಗಡೀಪಾರು (Deportation) ಮಾಡುವ ಪ್ರಕ್ರಿಯೆಯನ್ನು ಮಂಗಳೂರು ನಗರ ಪೊಲೀಸರು ಚುರುಕುಗೊಳಿಸಿದ್ದಾರೆ. ಇವರನ್ನು ಪಶ್ಚಿಮ ಬಂಗಾಳದ ಗಡಿ ಭದ್ರತಾ ಪಡೆಗೆ (BSF) ಹಸ್ತಾಂತರಿಸಲು 30 ಸಿಬ್ಬಂದಿಗಳಿದ್ದ ಪೊಲೀಸ್ ತಂಡವು ಮಂಗಳೂರಿನಿಂದ ಪಶ್ಚಿಮ ಬಂಗಾಳದ ಮಾಲ್ಡಾಗೆ ಕರೆದೊಯ್ಯುತ್ತಿದೆ.
ಣಾ ವ್ಯಾಪ್ತಿಯ ಕೋಡಿಕಲ್ ಪ್ರದೇಶಗಳ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಪೊಲೀಸರು ದಾಳಿ ನಡೆಸಿ ಈ 21 ಜನರನ್ನು ವಶಕ್ಕೆ ಪಡೆದಿದ್ದರು. ಇವರು ಸುಮಾರು 3 ತಿಂಗಳ ಹಿಂದೆ ಯಾವುದೇ ಪಾಸ್ಪೋರ್ಟ್ ಅಥವಾ ವೀಸಾ ಇಲ್ಲದೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಗಡಿ ಮೂಲಕ ಭಾರತಕ್ಕೆ ಅಕ್ರಮವಾಗಿ ನುಸುಳಿದ್ದರು. ಮುರ್ಷಿದಾಬಾದ್ನ ವಿಳಾಸ ಹೊಂದಿದ್ದ ಆಧಾರ್ ಕಾರ್ಡ್ಗಳಿಗೆ ತಮ್ಮ ಫೋಟೋಗಳನ್ನು ಅಂಟಿಸಿ ನಕಲಿ ಆಧಾರ್ ಕಾರ್ಡ್ಗಳನ್ನು ಸೃಷ್ಟಿಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಪುತ್ತೂರು ಹಲ್ಲೆ ಪ್ರಕರಣ: ತಾವು ಏನೂ ಮಾಡಿದರೂ ನಮ್ಮ ಬೆಂಬಲಕ್ಕೆ ಸರ್ಕಾರ ಇದೆ ಎಂಬ ಧೈರ್ಯ ಅವರಿಗೆ: ಕಟೀಲ್ ಆಕ್ರೋಶ
ಉತ್ತರ ಭಾರತದ ಕಾರ್ಮಿಕರ ಜೊತೆಯಲ್ಲಿ ಈ ಬಾಂಗ್ಲಾದೇಶಿಗಳನ್ನು ಕಾರ್ಮಿಕರೆಂದು ಬಿಂಬಿಸಿ ಮಂಗಳೂರಿಗೆ ಕರೆತಂದು ಕೆಲಸಕ್ಕೆ ಸೇರಿಸಿದ್ದ ಮೂವರು ಮಧ್ಯವರ್ತಿಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ. ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ನೀಡಿದ ನಿರ್ದೇಶನದಂತೆ ಗಡೀಪಾರು ಪ್ರಕ್ರಿಯೆ ಆರಂಭಿಸಲಾಗಿದೆ.
ಬಂಧಿತರನ್ನು ಮಂಗಳೂರಿನಿಂದ ಬಸ್ ಮೂಲಕ ಕರೆದೊಯ್ಯಲಾಗಿದ್ದು, ಪ್ರತ್ಯೇಕ ರೈಲು ಬೋಗಿಯ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾಗೆ ಪ್ರಯಾಣಿಸಲಿದ್ದಾರೆ. ಅಲ್ಲಿನ ಗಡಿ ಭದ್ರತಾ ಪಡೆಗೆ (BSF) ಹಸ್ತಾಂತರಿಸಿದ ನಂತರ, BSF ಅಧಿಕಾರಿಗಳು ಇವರನ್ನು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡುವ ಮುಂದಿನ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲಿದ್ದಾರೆ.
ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

